ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ವೇಳಾಪಟ್ಟಿ ಮತ್ತೆ ಬದಲು: ಶಿಕ್ಷಣ ಇಲಾಖೆ ಹೊಸ ಸುತ್ತೋಲೆ
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಹೊಸ ಸುತ್ತೊಲೆ ಹೊರಡಿಸಿಜೆ. ಅದರ ಪ್ರಕಾರ ಆಗಸ್ಟ್ 1 ರಿಂದ ಬೆಳಗ್ಗೆ 9 ...

Published On :
ಬೆಂಗಳೂರು: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಹೊಸ ಸುತ್ತೊಲೆ ಹೊರಡಿಸಿಜೆ. ಅದರ ಪ್ರಕಾರ ಆಗಸ್ಟ್ 1 ರಿಂದ ಬೆಳಗ್ಗೆ 9 ಗಂಟೆಗೆ ತರಗತಿಗಳು ಆರಂಭವಾಗಲಿವೆ.
ಈ ಹಿಂದೆ ಬೆಳಗ್ಗೆ 8 ಗಂಟೆಯಿಂದಲೇ ತರಗತಿಗಳನ್ನು ಆರಂಭಿಸಬೇಕೆಂದು ಶಿಕ್ಷಣ ಇಲಾಖೆ ಸೂಚಿಸಿತ್ತು, ಆದರೆ ವಿದ್ಯಾರ್ಥಿಗಳು ಕಾಲೇಜು ಸಿಬ್ಬಂದಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ವೇಳಾ ಪಟ್ಟಿ ಬದಲಾವಣೆ ಮಾಡಿದೆ.
ಶುಕ್ರವಾರ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಪ್ರಕಾರ ಆಗಸ್ಟ್1 ರಿಂದ ಬೆಳಗ್ಗೆ 9 ಗಂಟೆಗೆ ಪದವಿ ತರಗತಿಗಳು ಆರಂಭವಾಗಲಿವೆ, ಆದರೆ ಈಗಾಗಲೇ ಎರಡು ಪಾಳಿಗಳಲ್ಲಿ ಕೆಲಸ ಮಾಡುತ್ತಿರುವ ಕಾಲೇಜುಗಳು ಬೆಳಗ್ಗೆ 8 ಗಂಟೆಗೆ ತರಗತಿಗಳನ್ನು ಆರಂಭಿಸಿದ್ದು ಆ ಕಾಲೇಜುಗಳಲ್ಲಿ ಇದೇ ವೇಳಾ ಪಟ್ಟಿ ಮುಂದುವರಿಯಲಿದೆ. ಮಲೆನಾಡು, ಕರಾವಳಿ ಹಾಗೂ ಗ್ರಾಮೀಣ ಭಾಗದಲ್ಲವಿ ಸಾರಿಗೆ ಸಂಪರ್ಕ ಸರಿಯಾಗಿಲ್ಲದ ಕಾರಣ ವಿದ್ಯಾರ್ಥಿಗಳಿಂದ ಆಕ್ಷೇಪ ಬಂದಿತ್ತು, ಈ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ.
ಕಾಲೇಜು ವೇಳಾ ಪಟ್ಟಿ ಬದಲಾವಣೆಯಿಂದ ಪಠ್ಯೇತರ ಚಟುವಟಿಕೆಗಳಾದ ಎನ್‌ಎಸ್‌ಎಸ್, ಎಸ್‌ಸಿಸಿ, ಕೌಶಲಾಭಿವೃದ್ಧಿ ತರಬೇತಿ, ವಿಶೇಷ ತರಗತಿಗಳು, ಕ್ರೀಡಾ ಚಟುವಟಿಕೆಗಳನ್ನು ಯಾವುದೇ ರೀತಿಯಲ್ಲೂ ಕಡಿತಗೊಳಿಸುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Government degree collegeclassesdepartment of collegiate educationAugust 1ಸರ್ಕಾರಿ ಪದನಿ ಕಾಲೇಜುಆಗಸ್ಟ್-1ತರಗತಿ. ಕಾಲೇಜು ಶಿಕ್ಷಣಇಲಾಖೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


