ಮಹದಾಯಿಗಾಗಿ ಹೋರಾಟ; ನವಲಗುಂದದಲ್ಲಿ ರೈತರ ಉಪವಾಸ ಸತ್ಯಾಗ್ರಹ
ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಮಹದಾಯಿ ನದಿ ನೀರು...

Published On :
ನವಲಗುಂದ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಮಹದಾಯಿ ನದಿ ನೀರು ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರು ಮತ್ತು ನಿವೃತ್ತ ಶಿಕ್ಷಕ ಡಿ.ವಿ.ಕುರಹಟ್ಟಿ ಅವರ ನೇತೃತ್ವದಲ್ಲಿ ನವಲಗುಂದದಲ್ಲಿ ರೈತರು ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ತಾಲೂಕು ಬರಪೀಡಿತವಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಲೋಕನಾಥ ಹೆಬಸೂರು ಒತ್ತಾಯಿಸಿದರು. ಮಹದಾಯಿ ಯೋಜನೆ ಜಾರಿ ಕುರಿತು ಸರ್ಕಾರಗಳು ಸ್ಪಷ್ಟ ನಿಲುವು ತಾಳುವವರೆಗೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಲೋಕನಾಥ ಹೆಬಸೂರ ಹಾಗೂ ಡಿ.ಬಿ.ಕುರಹಟ್ಟಿ ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಇವರ ಆರೋಗ್ಯದಲ್ಲಿ ಏರುಪೇರಾದರೆ ಸರ್ಕಾರವೇ ಹೊಣೆ ಎಂದು ರೈತ ಹೋರಾಟಗಾರರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


