ಮೈಸೂರು: ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸಿಎಂ 'ಮೆಗಾ' ಕಿರಿಕಿರಿ
ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ 'ಕೊಟ್ಟ ಮಾತು ದಿಟ್ಟ ಹೆಜ್ಜೆ'....

Published On :
ಮೈಸೂರು: ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ 'ಕೊಟ್ಟ ಮಾತು ದಿಟ್ಟ ಹೆಜ್ಜೆ' ಎಂಬ ಮೆಗಾ ಸಮಾವೇಶ ನಡೆಸುತ್ತಿದ್ದು, ಸಮಾವೇಶದ ಪಕ್ಕದಲ್ಲೇ ಶನಿವಾರ ಪರೀಕ್ಷೆಗೆ ಹಾಜರಾದ ಪದವಿ ಮತ್ತ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ತೀವ್ರ ಕಿರಿಕಿರಿ ಅನುಭವಿಸಿದರು.
ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜ್ ಮತ್ತು ದೈಹಿಕ ಶಿಕ್ಷಣ ವಿಭಾಗದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಇಲ್ಲಿಂದ ಕೂಗಳತೆ ದೂರದಲ್ಲೇ ಮಹಾರಾಜ ಕಾಲೇಜ್ ಮೈದಾನದಲ್ಲಿ ಕಾಂಗ್ರೆಸ್ ಸರ್ಕಾರದ ಬೃಹತ್ ಸಮಾವೇಶ ನಡೆಯುತ್ತಿದೆ.
ಇಂದು ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆಗಳು ನಡೆಯುತ್ತಿದ್ದು, ಬೆಳಗ್ಗೆ 11ಗಂಟೆಗೆ ಪರೀಕ್ಷೆಯ ಸಮಯದಲ್ಲೇ ಸರ್ಕಾರ ಸಮಾವೇಶ ಆಯೋಜಿಸಿರುವುದರಿಂದ ವಿದ್ಯಾರ್ಥಿಗಳ ಭಾರಿ ಕಿರಿಕಿರಿ ಅನುಭವಿಸುತ್ತಿದ್ದಾರೆ.
ಪರೀಕ್ಷೆಗಳು ನಡೆಯುತ್ತಿರುವ ಕಾಲೇಜ್ ಪಕ್ಕದಲ್ಲೇ ಸಮಾವೇಶ ಆಯೋಜಿಸಿರುವುದರ ಬಗ್ಗೆ ಹಲವು ವಿದ್ಯಾರ್ಥಿಗಳು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ನಮ್ಮ ಭವಿಷ್ಯ ನಿರ್ಧರಿಸುವ ಪರೀಕ್ಷೆಗಳಿಗೆ ತೊಂದರೆ ನೀಡುವುತ್ತಿರುವುದು ದುರದೃಷ್ಟಕರ ಎಂದಿದ್ದಾರೆ. ಅಲ್ಲದೆ ಸಮಾವೇಶಕ್ಕೆ ಅನುಮತಿ ನೀಡಿದ ವಿವಿಯ ಆಡಳಿತ ಮಂಡಳಿಯ ವಿರುದ್ಧವೂ ವಿದ್ಯಾರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ 4 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ `ಕೊಟ್ಟ ಮಾತು ದಿಟ್ಟ ಹೆಜ್ಜೆ’ ಸಾಧನೆ, ಸೌಲಭ್ಯ ವಿತರಣಾ ಸಮಾವೇಶಕ್ಕೆ ಜನ ಸಾಗರವೇ ಹರಿದು ಬಂದಿತ್ತು.
ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದು 8,000 ಫಲಾನುಭವಿಗಳಿಗೆ ಕಾರು, ಟ್ರ್ಯಾಕ್ಟರ್, ಮೂರು ಚಕ್ರದ ವಾಹನಗಳು, ಕೃಷಿ ಪಂಪ್‍ಸೆಟ್ ಉಪಕರಣಗಳು, ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಹಾಯ ಧನ ವಿತರಣೆ, ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ವಿಧವಾ ವೇತನ, ವೃದ್ಧಾಪ್ಯ ವೇತನ, ಮನಸ್ವಿನಿ ಯೋಜನೆಯ ಸೌಲಭ್ಯ ವಿತರಣೆ, ಹೊಲಿಗೆ ಯಂತ್ರ ವಿವಿಧ ಸೌಲಭ್ಯಗಳು ಸೇರಿದಂತೆ ಹಲವು ಉಪಕರಣಗಳನ್ನು ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


