ಮಳೆಗಾಗಿ ಪೂಜೆ ವೆಚ್ಚವನ್ನು ನಾನೇ ಭರಿಸುತ್ತೇನೆ: ಸಚಿವ ಎಂ.ಬಿ. ಪಾಟೀಲ್
ಕೃಷ್ಣಾ ನದಿಯ ಉಗಮ ಸ್ಥಳವಾದ ಮಹಾಬಲೇಶ್ವರ ಹಾಗೂ ಕಾವೇರಿ ನದಿಯ ಉಗಮ ಸ್ಥಳ ತಲಕಾವೇರಿಯಲ್ಲಿ ಮಳೆಗಾಗಿ ಸರ್ಕಾರಿ ವೆಚ್ಚದಲ್ಲಿ ಯಾಗ ಮಾಡುವ ಮೂಲಕ ತೀವ್ರ ವಿವಾದಕ್ಕೆ ಸಿಲುಕಿದ್ದ...

Published On :
ಬೆಂಗಳೂರು: ಕೃಷ್ಣಾ ನದಿಯ ಉಗಮ ಸ್ಥಳವಾದ ಮಹಾಬಲೇಶ್ವರ ಹಾಗೂ ಕಾವೇರಿ ನದಿಯ ಉಗಮ ಸ್ಥಳ ತಲಕಾವೇರಿಯಲ್ಲಿ ಮಳೆಗಾಗಿ ಸರ್ಕಾರಿ ವೆಚ್ಚದಲ್ಲಿ ಯಾಗ ಮಾಡುವ ಯೋಜನೆ ಮೂಲಕ ತೀವ್ರ ವಿವಾದಕ್ಕೆ ಸಿಲುಕಿದ್ದ ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಇದೀಗ ಪೂಜಾ ವೆಚ್ಚವನ್ನು ತಾವೇ ಭರಿಸುವುದಾಗಿ ಪ್ರಕಟಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಈ ವಿವಾದದ ನಡುವೆಯೇ ನಿನ್ನೆ ಮಹಾಬಲೇಶ್ವರದಲ್ಲಿ ಪೂಜೆ ಸಾಂಗವಾಗಿ ನೆರವೇರಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉಭಯ ನದಿಗಳ ಉಗಮ ಸ್ಥಳದಲ್ಲಿ ಪೂಜೆಗೆ ಕರ್ನಾಟಕ ನೀರಾವರಿ ನಿಗಮ ಮತ್ತು ಕಾವೇರಿ ನೀರಾವರಿ ನಿಗಮದಿಂದ ತಲಾ ರೂ.10 ಲಕ್ಷಗಳನ್ನು ವೆಚ್ಚ ಮಾಡಲು ತೀರ್ಮಾನಿಸಲಾಗಿತ್ತು.
ನದಿ ಪೂಜೆ ನಮ್ಮ ಸಂಪ್ರದಾಯಗಳಾಗಿದ್ದು, ಸಂಸ್ಕೃತಿಯ ಭಾಗವಾಗಿದೆ. ಇದೇ ರೀತಿಯ ಪೂಜೆಯನ್ನು ಕಾವೇರಿ ಉಗಮ ಸ್ಥಾನ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿಯೂ ಜೂನ್.4ರಂದು ನೆರವೇರಿಸಲಾಗುತ್ತದೆ. ಪೂಜೆಗೆ ತಗಲುವ ವೆಚ್ಚವನ್ನು ನಾನು ಹಾಗೂ ನನ್ನ ಸ್ನೇಹಿತರೇ ಸೇರಿ ಭರಿಸುತ್ತೇವೆಂದು ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


