ಬೆಂಗಳೂರಿನಲ್ಲಿ ಬಾಲಕಿ ಅತ್ಯಾಚಾರ ಪ್ರಕರಣ: 24 ಗಂಟೆಗಳಲ್ಲೇ ಆರೋಪಿ ಬಂಧನ
5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ್ದಾರೆ....

Published On :
ಬೆಂಗಳೂರು: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸಿದ್ದಾರೆ.
ಆರೋಪಿಯನ್ನು ವೀರೇಶ್ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನ ಕೆಜಿ ಹಳ್ಳಿ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಆರೋಪಿ ಮಗುವನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರಿನ ಕೆಜಿ ಹಳ್ಳಿಯ ವೈಯಾಲಿಕಾವಲ್ ಸೊಸೈಟಿ ಬಳಿ ಮನೆಯಲ್ಲಿ ಎಂದಿನಂತೆ ಶುಕ್ರವಾರ ರಾತ್ರಿಯೂ ತಾಯಿಯ ಜೊತೆ ಮಲಗಿದ್ದ ಬಾಲಕಿ ರಾತ್ರಿ ಬಹಿರ್ದೆಸೆಗೆಂದು ಹೊರಗೆ ಬಂದಿದೆ. ಆದ್ರೆ ಈ ಬಗ್ಗೆ ತಾಯಿಗೆ ಗೊತ್ತಿರಲಿಲ್ಲ. ಬಾಲಕಿ ಹೊರಗೆ ಬಂದಿದ್ದ ವೇಳೆ ಕಾಮುಕ ಆಕೆಯನ್ನು ಕರೆದುಕೊಂಡು ಹೋಗಿ ವೈಯಲಿಕಾವಲ್ ಸೂಸೈಟಿ ಗ್ರೌಂಡ್ ನಲ್ಲಿ ಅತ್ಯಾಚಾರವೆಸಗಿದ್ದ. ಬಳಿಕ ಮನೆಯ ಬಳಿ ಬಾಲಕಿಯನ್ನು ಬಿಸಾಕಿ ಹೋಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


