ಕೇಂದ್ರದ ಯೋಜನೆಗಳ ಜಾರಿಗೆ ಕರ್ನಾಟಕ ಸರ್ಕಾರದ ನಿರಾಸಕ್ತಿ: ಕೇಂದ್ರ ಸಚಿವ ಪಿಯೂಶ್ ಗೋಯಲ್
ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಗಂಭೀರ ಆರೋಪ ಮಾಡಿದ್ದಾರೆ.
ಸಿಎಂ ಸಿದ್ದರಾಯಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ರಾಜ್ಯ ಸರ್ಕಾರ ಇದೇ ಪ್ರವೃತ್ತಿ ಮುಂದುವರೆಸಿದರೆ ತಾವೇ ಯೋಜನೆಗಳನ್ನು ಜನತೆಗೆ ನೇರ ತಲುಪಿಸುತ್ತೇವೆ ಎಂಬ ಎಚ್ಚರಿಕೆ ನೀಡಿದರು. ಕೇಂದ್ರ ಸರ್ಕಾರದ ಉಜಾಲ (ಎಲ್‌ಇಡಿ ಬಲ್ಬ್ ವಿತರಣೆ), ಉಜ್ವಲ (ಬಿಪಿಎಲ್ ಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕ), ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭಿಮಾ ಮೊದಲಾದ ಯೋಜನೆಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ ಎಂದು ಕೇಂದ್ರ ಇಂಧನ ಖಾತೆ ಸಚಿವ ಪಿಯೂಷ್ ಗೋಯಲ್ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಇದೇ ಪ್ರವೃತ್ತಿಯನ್ನು ಮುಂದುವರಿಸಿದರೆ ರಾಜ್ಯ ಸರ್ಕಾರದ ಬದಲಿಗೆ ಕೇಂದ್ರ ಸರ್ಕಾರವೇ ತನ್ನ ಯೋಜನೆಗಳನ್ನು ನೇರ ಜನತೆಗೆ ತಲುಪಿಸುವ ಕಾರ್ಯ ಮಾಡಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ. "ಕೇಂದ್ರ ಸರಕಾರದ ಉಜಾಲ ಯೋಜನೆಯಡಿ ಈಗಾಗಲೇ 23.89 ಕೋಟಿ ಎಲ್‌ಇಡಿ ಬಲ್ಬ್ ವಿತರಣೆ ಮಾಡಲಾಗಿದೆ. ಆದರೆ, ಸಾಕಷ್ಟು ಎಲ್‌ಇಡಿ ಬಲ್ಬ್ ಕೊಡುತ್ತೇವೆ ಎಂದು ಹೇಳಿದ್ದರೂ ಕರ್ನಾಟಕ ಕೇವಲ 1.58 ಕೋಟಿ ಮಾತ್ರ ವಿತರಣೆ ಮಾಡಿದೆ. ಅಲ್ಲದೆ, ಮಹಿಳಾ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಉಜ್ವಲ (ಎಲ್‌ಪಿಜಿ ವಿತರಣೆ) ಯೋಜನೆಯನ್ನು ರಾಜ್ಯ ಸರಕಾರ ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ. ಜತೆಗೆ ರಾಜ್ಯದಲ್ಲಿ ಬರ ಇದ್ದರೂ ರೈತರಿಗೆ ಅನುಕೂಲವಾಗುವ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ. ಮಣ್ಣು ಆರೋಗ್ಯ ಕಾರ್ಡ್ ವಿತರಿಸಲು ವಿಳಂಬ ಮಾಡುತ್ತಿದ್ದಾರೆ" ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ಪಿಯೂಶ್ ಗೋಯಲ್ ಅವರ ಈ ಆರೋಪವನ್ನು ರಾಜ್ಯ ಸರ್ಕಾರ ಅಲ್ಲಗಳೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


