ರಾಜ್ಯ

ಹಾಸನದಲ್ಲಿ ಆನೆ ಕಾರಿಡಾರ್ ನಿರ್ಮಾಣಕ್ಕೆ ರಾಜ್ಯದಿಂದ ಕೇಂದ್ರದ ಧನ ಸಹಾಯ ಕೋರಿಕೆ

ಹೆಚ್ಚುತ್ತಿರುವ ಆನೆಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ 272 ಕೋಟಿ ರು ವೆಚ್ಚದಲ್ಲಿ ಆನೆ ಕಾರಿಡಾರ್ ನಿರ್ಮಾಣ ಮಾಡಲು...

ಹಾಸನದಲ್ಲಿ ಆನೆ ಕಾರಿಡಾರ್ ನಿರ್ಮಾಣಕ್ಕೆ ರಾಜ್ಯದಿಂದ ಕೇಂದ್ರದ ಧನ ಸಹಾಯ ಕೋರಿಕೆ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಹೆಚ್ಚುತ್ತಿರುವ ಆನೆಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ  272  ಕೋಟಿ ರು ವೆಚ್ಚದಲ್ಲಿ ಆನೆ ಕಾರಿಡಾರ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. 
ಹೆತ್ತೂರು ಹೋಬಳಿಯ 7 ಹಳ್ಳಿಗಳ ವ್ಯಾಪ್ತಿಯ 3,143 ಎಕರೆ ಭೂಮಿ ಸ್ವಾಧೀನ ಮಾಡಿಕೊಂಡು ಆನೆ ಕಾರಿಡಾರ್  ಮಾಡಲು ನಿರ್ಧರಿಸಲಾಗಿದೆ. ಆನೆಗಳು ಬಹುಕಾಲದಿಂದ ವಲಸೆ ಮಾರ್ಗವಾಗಿ  ಬಳಸುವ ಕಾಡಿನ ಮಧ್ಯಭಾಗ ಹಾಗೂ ಹೊಂದಿಕೊಂಡಂತಿರುವ ಖಾಸಗಿ ಜಮೀನುಗಳನ್ನು ಖರೀದಿಸಿ ನಿರ್ಮಿಸಲು ನಿರ್ಧರಿಸಲಾಗಿದೆ. 
ಹೊಸ ಭೂ ಸ್ವಾಧೀನ ಕಾಯಿದೆಯಂತೆ ಜಮೀನು ಸ್ವಾಧೀನ ಮಾಡಿಕೊಳ್ಳಬೇಕಿದ್ದು, ಈ ಉದ್ದೇಶಕ್ಕೆ ಅಗತ್ಯವಾದ 272 ಕೋಟಿ ರು. ಅನುದಾನವನ್ನು ಕಾಂಪಾ ನಿಧಿಯಿಂದ ಭರಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ವಿಧಾನಸಭೆಯಲ್ಲಿ ಅರಣ್ಯ ಸಚಿವ ರಮಾನಾಥ ರೈ  ವಿವರಿಸಿದ್ದಾರೆ.
ಸಕಲೇಶಪುರ ತಾಲೂಕಿನ ಹೂಂಕರವಳ್ಳಿಯಲ್ಲಿ ಜೂನ್- 3ರಂದು  ರೈತನೊಬ್ಬ ಆನೆ ದಾಳಿಯಲ್ಲಿ ಮೃತಪಟ್ಟ ಪ್ರಕರಣದ ಬಗ್ಗೆ ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಯಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.