ಸುಪ್ರೀಂ ಕೋರ್ಟ್ ಆದೇಶ ಪಾಲನೆ: ರಾಜ್ಯದ 6 ಸಾವಿರ ಮದ್ಯದ ಅಂಗಡಿಗಳಿಗೆ ಮುಚ್ಚಲೇಬೇಕಾದ ಆತಂಕ
ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದ ಅಂಗಡಿಗಳನ್ನು ತೆರವುಗೊಳಿಸಬೇಕೆಂಬ ಸುಪ್ರೀಂ ಕೋರ್ಟ್ ನ ಆದೇಶದ ಪ್ರಕಾರ ರಾಜ್ಯದಲ್ಲಿ 6,000 ಮದ್ಯದ ಅಂಗಡಿಗಳು...

Published On :
ಬೆಂಗಳೂರು: ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದ ಅಂಗಡಿಗಳನ್ನು ತೆರವುಗೊಳಿಸಬೇಕೆಂಬ ಸುಪ್ರೀಂ ಕೋರ್ಟ್ ನ ಆದೇಶದ ಪ್ರಕಾರ ರಾಜ್ಯದಲ್ಲಿ 6,000 ಮದ್ಯದ ಅಂಗಡಿಗಳು ಬೇರೆ ಮಾರ್ಗ ಇಲ್ಲದೇ ಮುಚ್ಚಬೇಕಾಗಿವೆ.
500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದ ಅಂಗಡಿಗಳನ್ನು ಮುಚ್ಚುವುದಕ್ಕೆ ಸುಪ್ರೀಂ ಕೋರ್ಟ್ ಜೂ. 30 ರ ಗಡುವು ನೀಡಿದ್ದು, ಈ ವರೆಗೂ 38 ಬಾರ್/ ರೆಸ್ಟೋರೆಂಟ್ ಗಳು ಸ್ಥಳಾಂತರಗೊಂಡಿವೆ. ಅಧಿವೇಶನದಲ್ಲಿ ಅಬಕಾರಿ ಇಲಾಖೆ ಈ
ಬಗ್ಗೆ ಮಾಹಿತಿ ಬಹಿರಂಗಗೊಳಿಸಿದ್ದು, ಇನ್ನು 24 ದಿನಗಳಲ್ಲಿ 5,977 ಅಂಗಡಿಗಳು ಸ್ಥಳಾಂತರಗೊಳ್ಳಬೇಕಿದೆ ಎಂದು ಹೇಳಿದೆ.
ರಾಜ್ಯ ಹೆದ್ದಾರಿಯ 500 ಮೀಟರ್ ವ್ಯಾಪ್ತಿಯಲ್ಲಿ 3,307 ಮದ್ಯದ ಅಂಗಡಿಗಳು, ರೆಸ್ಟೋರೆಂಟ್ ಗಳಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ 2,708 ಮದ್ಯದ ಅಂಗಡಿಗಳಿವೆ. ಈ ಎಲ್ಲಾ ಮದ್ಯದ ಅಂಗಡಿಗಳು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಜೂ.30 ರ ಒಳಗೆ ಸ್ಥಳಾಂತರಗೊಳ್ಳಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


