ರಾಜ್ಯ

ಜೂ.12ರಂದು ಕರ್ನಾಟಕ ಬಂದ್ ಗೆ ವಾಟಾಳ್ ಕರೆ, ಹಲವು ಸಂಘಟನೆಗಳಿಂದ ವಿರೋಧ

ಬಯಲು ಸೀಮೆ ಮತ್ತು ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಜೂ.12ರಂದು ಕನ್ನಡ...

ಜೂ.12ರಂದು ಕರ್ನಾಟಕ ಬಂದ್ ಗೆ ವಾಟಾಳ್ ಕರೆ, ಹಲವು ಸಂಘಟನೆಗಳಿಂದ ವಿರೋಧ
ವಾಟಾಳ್ ನಾಗರಾಜ್
Published On :
ಬೆಂಗಳೂರು: ಬಯಲು ಸೀಮೆ ಮತ್ತು ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಜೂ.12ರಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಆದರೆ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
ಕನ್ನಡ ಒಕ್ಕೂಟ ಕರೆ ನೀಡಿರುವ ರಾಜ್ಯ ಬಂದ್ ಗೆ ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ಕೆಎಸ್ ಆರ್ ಟಿಸಿ, ಬಿಎಂಟಿಸಿ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳೇ ಬೆಂಬಲ ನೀಡಲು ನಿರಾಕರಿಸಿವೆ. ಹೀಗಾಗಿ ಸೋಮವಾರ ಬಂದ್ ಇದೆಯೋ ಇಲ್ಲವೋ ಎಂಬ ಗೊಂದಲ ಹುಟ್ಟಿಕೊಂಡಿದೆ.
ಜೂನ್ 12ರ ಬಂದ್ ಗೆ ನಾವು ಬೆಂಬಲ ಸೂಚಿಸುತ್ತಿಲ್ಲ ಎಂದು ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಹಾಗೂ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇನ್ನು ಆಟೋ ಚಾಲಕರು ಸಹ ಬಂದ್ ಗೆ ಬೆಂಬಲ ನೀಡವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಜೂನ್ 12ರ ಬಂದ್ ಗೆ ವಾಟಾಳ್ ನಾಗರಾಜ್ ಅವರು ಎಲ್ಲಾ ಸಂಘಟನೆಗಳ ಮನವೊಲಿಸಿ ಬೆಂಬಲ ಪಡೆದುಕೊಳ್ಳುತ್ತಾರೋ ಅಥವಾ ಬಂದ್ ಹಿಂಪಡೆಯುತ್ತಾರೆ ಎಂಬುದು ನಾಳೆ ಸ್ಪಷ್ಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.