ರಾಜ್ಯ

ಮೈಸೂರು ವಿಶ್ವವಿದ್ಯಾಲಯಕ್ಕೆ ಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್-IV ಹೆಸರಿಡಲು ನಿರ್ಧಾರ

ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯಕ್ಕೆ ಅದರ ಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್...

ಮೈಸೂರು ವಿಶ್ವವಿದ್ಯಾಲಯಕ್ಕೆ ಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್-IV ಹೆಸರಿಡಲು ನಿರ್ಧಾರ
ಸಾಂದರ್ಭಿಕ ಚಿತ್ರ
Published On :
ಮೈಸೂರು: ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯಕ್ಕೆ ಅದರ ಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನಿಡಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯದ ಉಸ್ತುವಾರಿ ಉಪ ಕುಲಪತಿ ಪ್ರೊ. ದಯಾನಂದ್  ಮನೆ ತಿಳಿಸಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದೇ 22ರಂದು ನಡೆಯುವ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ನಿರ್ಣಯವನ್ನು ಹೊರಡಿಸಲಾಗುವುದು ಎಂದು ಹೇಳಿದರು.
ಇದನ್ನು ನಂತರ ಸರ್ಕಾರಕ್ಕೆ ಅನುಮೋದನೆಗೆ ಕಳುಹಿಸಲಾಗುವುದು ಎಂದರು.
ಮೈಸೂರು  ರಾಜರ ಹೆಸರನ್ನು  ವಿಶ್ವವಿದ್ಯಾಲಯಕ್ಕಿಡುವಂತೆ ಇದಕ್ಕೂ ಮುನ್ನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕನಾಥ್ ಸರ್ಕಾರವನ್ನು ಒತ್ತಾಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.