ಕುಮಟಾದಲ್ಲಿ ಗುಡ್ಡ ಕುಸಿತ: ಮೂರು ಮಕ್ಕಳ ಸಾವು, ಏಳು ಮಹಿಳೆಯರಿಗೆ ಗಂಭೀರ ಗಾಯ
ದಿವಗಿ ಗ್ರಾಮದ ತಂಡರ್ಕುಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಗುಡ್ಡ ಕುಸಿದು ಪರಿಣಾಮ ಮೂರು ಮಕ್ಕಳು ದಾರುಣ ಸಾವನ್ನಪ್ಪಿದ್ದಾರೆ...

Published On :
ಕುಮಟಾ: ದಿವಗಿ ಗ್ರಾಮದ ತಂಡರ್ಕುಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಗುಡ್ಡ ಕುಸಿದು ಪರಿಣಾಮ ಮೂರು ಮಕ್ಕಳು ದಾರುಣ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಗುಡ್ಡವನ್ನು ಕಡಿಯಲಾಗಿತ್ತು. ಇನ್ನು ಕುಮಟಾದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡು ಮೀನುಗಾರರ ಮನೆಯ ಮೇಲೆ ಕುಸಿದಿದೆ. ಪರಿಣಾಮ ಅವಶೇಷಗಳಡಿ ಸಿಲುಕಿ ಮಕ್ಕಳಾದ ಭವ್ಯಾ ಅಂಬಿಗ(13), ಯತೀನ್(7) ಮತ್ತು ಧನುಷ್ ದಾರುಣ ಸಾವನ್ನಪ್ಪಿದ್ದಾರೆ. ಇನ್ನು ಮನೆಯಲ್ಲಿದ್ದ ಮಹಿಳೆಯರು ಸೇರಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಡ್ಡ ಕುಸಿತದ ಹಿನ್ನೆಲೆ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು ಅಗ್ನಿ ಶಾಮಕದಳದ ಸಿಬ್ಬಂದಿ ಪೊಲೀಸರು ಮತ್ತು ಸ್ಥಳೀಯರು ನೆರವಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


