ಬೆಂಗಳೂರು: ಬಂಧಿಸಲು ಹೋದ ಪೊಲೀಸರ ಮೇಲೆ ರೌಡಿ ಶೀಟರ್ ನಿಂದ ಹಲ್ಲೆ
ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ನಕುಲ್‍ನನ್ನ ಬಂಧಿಸಲು ಹೋದಾಗ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾದ .

Published On :
ಬೆಂಗಳೂರು: ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ನಕುಲ್‍ನನ್ನ ಬಂಧಿಸಲು ಹೋದಾಗ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾದ ರೌಡಿ ಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಸ್ನೇಹಿತನ ಕೊಲೆಗೆ ಯತ್ನಿಸಿ ಪರಾರಿಯಾಗುತ್ತಿದ್ದ ರೌಡಿ ನಕುಲ್ ಅಲಿಯಾಸ್ ನಾಯಿ ನಕುಲ್ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಕಾಲಿಗೆ ಗುಂಡು ತಗುಲಿ ಗಾಯಗೊಂಡಿರುವ ಆರೋಪಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಕುಲ್ ವಿರುದ್ಧ ಈ ಹಿಂದೆಯೇ ಕೊಲೆ, ಕೊಲೆಗೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿವೆ. ಪುರುಷೋತ್ತಮ ಎಂಬವರ ಕೊಲೆ ಪ್ರಕರಣ ಸಂಬಂಧ ಜೈಲುಪಾಲಾಗಿದ್ದ ಆತ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದ. ಬಳಿಕ ಸ್ನೇಹಿತ ಜೋಸೆಫ್ ಎಂಬಾತನ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದರು.
ರೈನ್‌ಬೊ ಲೇಔಟ್‌ನಲ್ಲಿರುವ ಜೋಸೆಫ್ ಮನೆಗೆ ಶುಕ್ರವಾರ ಸಂಜೆ 6 ಗಂಟೆಯ ಸುಮಾರಿಗೆ ಸಹಚರರೊಂದಿಗೆ ಹೋಗಿದ್ದ ಆರೋಪಿಯು, ಅವರ ಮೇಲೆ ಹಲ್ಲೆ ನಡೆಸಿದ್ದ. ಮನೆಯ ಕಿಟಕಿಯ ಗಾಜುಗಳನ್ನು ಒಡೆದು ಹಾಕಿದ್ದ. ಈ ಬಗ್ಗೆ ಸ್ಥಳೀಯರು ವಿದ್ಯಾರಣ್ಯ ಠಾಣೆಗೆ ಮಾಹಿತಿ ನೀಡಿದ್ದರು.
ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದಂತೆಯೇ, ಆರೋಪಿ ಹಾಗೂ ಆತನ ಸಹಚರರು ಅಲ್ಲಿಂದ ತಪ್ಪಿಸಿಕೊಂಡರು. ಆಗ ಇನ್‌ಸ್ಪೆಕ್ಟರ್ ಪುನೀತ್ ನೇತೃತ್ವದ ತಂಡ ಆರೋಪಿಗಳನ್ನು ಬೆನ್ನಟ್ಟಿತ್ತು. ರೈನ್‌ಬೊ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ಆತನನ್ನು ಹಿಡಿಯಲು ಕಾನ್‌ಸ್ಟೆಬಲ್ ಸಿದ್ಧರಾಜು ಪ್ರಯತ್ನಿಸಿದರು.
ಆಗ ನಕುಲ್ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ. ಅದನ್ನು ಗಮನಿಸಿದ ಇನ್‌ಸ್ಪೆಕ್ಟರ್ ಪುನೀತ್, ಆರೋಪಿಯ ಕಾಲಿಗೆ ಗುಂಡು ಹಾರಿಸಿದರು. ಸ್ಥಳದಲ್ಲೇ ಕುಸಿದು ಬಿದ್ದಿದ್ದ ಆತನನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದರು ಎಂದು ಹಿರಿಯ ಅಧಿಕಾರಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


