ಮೈಸೂರು ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ಬಾಲ ಕಾರ್ಮಿಕ ಇಲ್ಲ: ಸಮೀಕ್ಷೆ
ಹಲವು ಜಿಲ್ಲೆಗಳ ಹಲವು ಭಾಗಗಳಲ್ಲಿ ಬಾಲ ಕಾರ್ಮಿಕರು ಕಾಣ ಸಿಗುವುದು ಸಾಮಾನ್ಯ. ಆದರೆ ಮೈಸೂರು ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ಬಾಲ ಕಾರ್ಮಿಕ ಕೂಡ ಇಲ್ಲ ಎಂದು...

Published On :
ಮೈಸೂರು: ಹಲವು ಜಿಲ್ಲೆಗಳ ಹಲವು ಭಾಗಗಳಲ್ಲಿ ಬಾಲ ಕಾರ್ಮಿಕರು ಕಾಣ ಸಿಗುವುದು ಸಾಮಾನ್ಯ. ಆದರೆ ಮೈಸೂರು ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ಬಾಲ ಕಾರ್ಮಿಕ ಕೂಡ ಇಲ್ಲ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ.
ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಸೊಸೈಟಿ ನಡೆಸಿದ ಸರ್ವೆ ಅಚ್ಚರಿಯ ಫಲಿತಾಂಶ ನೀಡಿದೆ, 2001 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಮೈಸೂರು ಜಿಲ್ಲೆಯಲ್ಲಿ 360 ಬಾಲ ಕಾರ್ಮಿಕರು ಪತ್ತೆಯಾಗಿದ್ದರು.
ಆದರೆ ಈ ಸಮೀಕ್ಷೆ ಅವೈಜ್ಞಾನಿಕ ಎಂದು ಹೇಳಿರುವ ಮೈಸೂರು ಡಿಸಿ ಹಾಗೂ ಬಾಲ ಕಾರ್ಮಿಕ ಯೋಜನೆ ಸೊಸೈಟಿಯ ಅಧ್ಯಕ್ಷರೂ ಆಗಿರುವ ಡಿ. ರಣದೀಪ್ ಮರು ಸಮೀಕ್ಷೆಗೆ ಆದೇಶಿಸಿದ್ದಾರೆ.
7 ತಾಲೂಕುಗಳಲ್ಲಿ ಕಾರ್ಮಿಕ ಇನ್ಸ್ ಪೆಕ್ಟರ್ ಗಳ ನೆರವಿನೊಂದಿಗೆ ವಿವಿಧ ಎನ್ ಜಿಒಗಳು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿವೆ. ಆದರೆ ಕಾರ್ಮಿಕ ಇಲಾಖೆ ಇನ್ಸ್ ಪೆಕ್ಟರ್ ಗಳು ಈ ಸಮೀಕ್ಷೆಯಲ್ಲಿ ಭಾಗವಹಿಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಆದರೆ ಈ ಸಂಬಂಧ ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳು, ಕಾರ್ಮಿಕ ಇಲಾಖೆ ಅಧಿಕಾರಿಳು ಯಾವುದೇ ಪ್ರತಿಕ್ರಿಯೆ ನೀಡದೇ ಬಾಯಿ ಮುಚ್ಚಿ ಕುಳಿತಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮೈಸೂರುSurveyಸಮೀಕ್ಷೆMysuruchild labourersಬಾಲ ಕಾರ್ಮಿಕರುNational Child Labour Project Societyರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಸೊಸೈಟಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


