ರಾಜ್ಯ

ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 40 ರೋಗಿಗಳ ಸ್ಥಳಾಂತರ

ಅತ್ತ ಲಂಡನ್ ನಲ್ಲಿ ಅಪಾರ್ಟ್ ಮೆಂಟ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವಂತೆಯೇ ಇತ್ತ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲೂ ಅಗ್ನಿ ಅಕಸ್ಮಿಕ ಸಂಭವಿಸಿದ್ದು, 40ಕ್ಕೂ ಹೆತ್ತು ರೋಗಿಗಳನ್ನು ಸ್ಥಳಾಂತರಿಸಿದ ಘಟನೆ ಬುಧವಾರ ನಡೆದಿದೆ.

ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 40 ರೋಗಿಗಳ ಸ್ಥಳಾಂತರ
ಸಿಬ್ಬಂದಿಯಿಂದ ರೋಗಿಗಳ ಸ್ಥಳಾಂತರ
Published On :

ಬೆಂಗಳೂರು: ಅತ್ತ ಲಂಡನ್ ನಲ್ಲಿ ಅಪಾರ್ಟ್ ಮೆಂಟ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವಂತೆಯೇ ಇತ್ತ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲೂ ಅಗ್ನಿ ಅಕಸ್ಮಿಕ ಸಂಭವಿಸಿದ್ದು, 40ಕ್ಕೂ ಹೆತ್ತು ರೋಗಿಗಳನ್ನು  ಸ್ಥಳಾಂತರಿಸಿದ ಘಟನೆ ಬುಧವಾರ ನಡೆದಿದೆ.

ಮಣಿಪಾಲ್ ಆಸ್ಪತ್ರೆಯ ಐಸಿಯು ಘಟಕದಲ್ಲಿ ಇಂದು ಬೆಳಗ್ಗೆ ಸುಮಾರು 9.45ರ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತ ಆಸ್ಪತ್ರೆ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ರೋಗಿಗಳನ್ನು ಸ್ಥಳಾಂತರಿಸಿದ್ದಾರೆ. ಅಗ್ನಿ  ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದ್ದು, ವಿಚಾರ ತಿಳಿದ ಕೂಡಲೇ 4 ವಾಹನಗಳಲ್ಲಿ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಇನ್ನು ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯ ಮತ್ತೊಂದು ಘಚಕಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ. ಘಟನೆಯಲ್ಲಿ ಈ ವರೆಗೂ  ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆ ಸಿಇಒ ಡಾ. ಪ್ರಮೋದ್ ಕೃಷ್ಣನ್ ಅವರು, ಮೊದಲ ಅಂತಸ್ತಿನಲ್ಲಿರುವ ಐಸಿಯು ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿತ್ತು, ಇದೀಗ ಅಗ್ನಿಶಾಮಕ ಸಿಬ್ಬಂದಿ ಅದನ್ನು  ನಂದಿಸಿದ್ದಾರೆ. ಯಾವುದೇ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.