ಭೀಕರ ಅಪಘಾತ: ಕೆಎಸ್ಆರ್ ಟಿಸಿ ಬಸ್ ಚಾಲಕನ ಆತುರಕ್ಕೆ ಬೈಕ್ ಗೆ ಗುದ್ದಿದ ಬಸ್, ಸವಾರ ಸ್ಥಳದಲ್ಲೇ ಸಾವು!
ಕೆಎಸ್ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಚಾಲನೆಗೆ ಮೈಸೂರಿನಲ್ಲಿ ಅಮಾಯಕ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಮೈಸೂರು: ಕೆಎಸ್ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಚಾಲನೆಗೆ ಮೈಸೂರಿನಲ್ಲಿ ಅಮಾಯಕ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಮಾಗಳಿ ಗ್ರಾಮದ ಮಂಜುನಾಥ್ ಹಾಗೂ ರವಿಕುಮಾರ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ವೊಂದನ್ನು ಹಿಂದಿಕ್ಕುವ ರಭಸದಲ್ಲಿ ಕೆಎಸ್ ಆರ್ ಟಿಸಿ ಬಸ್ ಚಾಲಕ ಎದುರಿಗೆ ಬರುತ್ತಿದ್ದ ಇವರ ಬೈಕ್ ಗೆ ನೇರವಾಗಿ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ರವಿಕುಮಾರ್ ಹಾಗೂ ಮಂಜುನಾಥ್ ಬೈಕ್ ಎಗರಿ ಪಕ್ಕದಲ್ಲಿ ಬಿದ್ದಿದ್ದು, ಈ ವೇಳೆ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಸಿಸಿ ಕ್ಯಾಮೆರಾದಲ್ಲಿ ಅಪಘಾತದ ಭಯಾನಕ ದೃಶ್ಯ ಸೆರೆಯಾಗಿದೆ. ಘಟನೆ ಬಗ್ಗೆ ಹುಣಸೂರು ಪಟ್ಟಣ ಪೊ ಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಘಟನೆ ನಡೆದು 24 ಗಂಟೆಗಳೇ ಕಳೆದರೂ ಇಲಾಖೆಯ ಯಾವೊಬ್ಬ ಅಧಿಕಾರಿಗಳು ಕೂಡ ಇತ್ತ ಮುಖ ಮಾಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


