ರಾಜ್ಯ ಸರ್ಕಾರದಿಂದ ಎಲ್ಲರಿಗೂ ಉಚಿತ ಆರೋಗ್ಯ ಭಾಗ್ಯ: ರಮೇಶ್ ಕುಮಾರ್
ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ಉಚಿತ ಆರೋಗ್ಯ ಭಾಗ್ಯ ಸೇವೆ ಕಲ್ಪಿಸಲು...

Published On :
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಸರ್ಕಾರ ಎಲ್ಲರಿಗೂ ಉಚಿತ ಆರೋಗ್ಯ ಭಾಗ್ಯ ಸೇವೆ ಕಲ್ಪಿಸಲು ನಿರ್ಧರಿಸಿದೆ.
ಸಾರ್ವತ್ರಿಕ ಆರೋಗ್ಯ ಕಾರ್ಡ್’ (ಯೂನಿವರ್ಸಲ್ ಹೆಲ್ತ್‌ಕೇರ್ ಕವರೇಜ್) ಯೋಜನೆಯಡಿ ರಾಜ್ಯದ ಎಲ್ಲರಿಗೂ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸಾ ಸೌಲಭ್ಯ ಒದಗಿಸಲಾಗುವುದು.
ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುತ್ತಿರುವ ದೇಶದ ಮೊದಲ ರಾಜ್ಯ ಕರ್ನಾಟಕ ಎಂದು ಆರೋಗ್ಯ ಸಚಿವ ಕೆ. ರಮೇಶ್ ಕುಮಾರ್ ಹೇಳಿದ್ದಾರೆ.
ಜೆಡಿಎಸ್‌ನ ಕೆ. ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಿಪಿಎಲ್, ಎಪಿಎಲ್ ಎಂದು ನೋಡದೆ ಎಲ್ಲರಿಗೂ ಆರೋಗ್ಯ ಸೇವೆ ಒದಗಿಸಲು ತೀರ್ಮಾನಿಸಲಾಗಿದೆ. ಯಾರೂ ಖಾಸಗಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಬಾರದು. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿ ಚಿಕಿತ್ಸೆ ಪಡೆದ ಬಳಿಕ ಎರಡನೇ ಅಥವಾ ಮೂರನೇ ಹಂತದ ಚಿಕಿತ್ಸಾ ವೆಚ್ಚ ಭರಿಸುವ ಸಂಬಂಧ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.
ಹೆಲ್ತ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡಲಾಗುವುದು, ಸದ್ಯದ ಪರಿಸ್ಥಿತಿಯಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಮಾತ್ರ ಆಯ್ದ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರಖಾಸಗಿ ಆಸ್ಪತ್ರೆCongress governmentFree medical treatment. Private Hospitalಉಚಿತ ಆರೋಗ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


