ನಮ್ಮ ಮೆಟ್ರೋ ಫೇಸ್-1 ಲೋಕಾರ್ಪಣೆಗೊಳಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಪೂರ್ಣ ಪ್ರಮಾಣದ ನಮ್ಮ ಮೆಟ್ರೋ ಮೊದಲ ಹಂತವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಲೋಕಾರ್ಪಣೆಗೊಳಿಸಿದರು...

Published On :
ಬೆಂಗಳೂರು: ಪೂರ್ಣ ಪ್ರಮಾಣದ ನಮ್ಮ ಮೆಟ್ರೋ ಮೊದಲ ಹಂತವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಲೋಕಾರ್ಪಣೆಗೊಳಿಸಿದರು.
ವಿಧಾನಸೌಧದ ಆವರಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ನಮ್ಮ ಮೆಟ್ರೋಗೆ ಪ್ರಣಬ್ ಮುಖರ್ಜಿ ಅವರು ಚಾಲನೆ ನೀಡಿದರು. ಪ್ರಣಬ್ ಮುಖರ್ಜಿ ಅವರು ಚಾಲನೆ ನೀಡುತ್ತಿದ್ದಂತೆ ಸಂಪಿಗೆ ರಸ್ತೆ ಮತ್ತು ಯಲಚೇನಹಳ್ಳಿಯ ಮೆಟ್ರೋ ನಿಲ್ದಾಣದಿಂದ ಮೆಟ್ರೋ ರೈಲು ಸಂಚಾರ ಆರಂಭಿಸಿದವು.
ಚಾಲನೆ ಹಿನ್ನಲೆ ವಿಧಾನಸೌಧದ ಅವರಣದಲ್ಲಿ ಸುಮಾರು 2 ಸಾವಿರ ಮಂದಿಗೆ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿತ್ತು. ಇನ್ನು ಪ್ರಣಬ್ ಮುಖರ್ಜಿ ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ವೆಂಕಯ್ಯನಾಯ್ಡು, ರಾಜ್ಯ ಸಚಿವ ಕೆಜೆ ಜಾರ್ಜ್ ಉಪಸ್ಥಿತರಿದ್ದರು.
ಇದೀಗ ಎಲ್ಲಾ ಭಾಗಗಳಿಂದಲೂ ಸಂಪರ್ಕ ಕಲ್ಪಿಸುವ ಕೆಂಪೇಗೌಡ ಮೆಟ್ರೋ ನಿಲ್ದಾಣ ಭಾರತದ ಅತಿ ದೊಡ್ಡ ಮೆಟ್ರೋ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruPranab Mukherjeeಪ್ರಣಬ್ ಮುಖರ್ಜಿNamma Metroನಮ್ಮ ಮೆಟ್ರೋBMRCLಬಿಎಂಆರ್ ಸಿಎಲ್phase-1 Launchಮೊದಲ ಹಂತದ ಉದ್ಘಾಟನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


