ಎಲ್ ಪಿಜಿ ಪೂರೈಕೆ ಸಂಬಂಧ ರಾಜ್ಯದೊಂದಿಗೆ ಘರ್ಷಣೆಯಿಲ್ಲ: ಧರ್ಮೇಂದ್ರ ಪ್ರಧಾನ್
ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ರಾಜ್ಯದಲ್ಲಿ ಶೀಘ್ರವೇ ಜಾರಿಯಾಗಲಿದ್ದು, ಈ ಸಂಬಂಧ ಕರ್ನಾಟಕ ಸರ್ಕಾರದ ಜೊತೆ ಯಾವುದೇ ಘರ್ಷಣೆ...

Published On :
ಹುಬ್ಬಳ್ಳಿ: ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ರಾಜ್ಯದಲ್ಲಿ ಶೀಘ್ರವೇ ಜಾರಿಯಾಗಲಿದ್ದು, ಈ ಸಂಬಂಧ ಕರ್ನಾಟಕ ಸರ್ಕಾರದ ಜೊತೆ ಯಾವುದೇ ಘರ್ಷಣೆ, ವಿವಾದಗಳಿಲ್ಲ ಎಂದು ರಾಜ್ಯ ಪೆಟ್ರೋಲ್ ಮತ್ತು ಪ್ರಾಕೃತಿಕ ಅನಿಲ ಇಲಾಖೆಯ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಅನಿಲ ಪೂರೈಕೆ ಸಂಬಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಘರ್ಷಣೆ ಹೇಳಿಕೆಗಳು ಕೇವಲ ವದಂತಿಗಳಷ್ಟೇ ಎಂದು ಸ್ಪಷ್ಟ ಪಡಿಸಿದ್ದಾರೆ.
2011 ರಲ್ಲಿ ನಡೆದ ಸಾಮಾಜಿಕ-ಆರ್ಥಿಕ ಜಾತಿ ಗಣತಿ ಪಟ್ಟಿಯಿಂದ ಹೆಸರು ಬಿಟ್ಟು ಹೋಗಿರುವವರಿಗೆ ರಾಜ್ಯ ಸರ್ಕಾರ ಉಚಿತ ಅನಿಲ ಪೂರೈಕೆ ಮಾಡುತ್ತದೆ.
ಎಸ್ಇಸಿಸಿ ಯೋಜನೆಯಡಿ ಕರ್ನಾಟಕದಲ್ಲಿ 36 ಲಕ್ಷ ಫಲಾನುಭವಿಗಳಿದ್ದಾರೆ. ಈಗಾಗಲೇ 6 ಲಕ್ಷ ಮಂದಿ ಅನಿಲ ಸಂಪರ್ಕ ಪಡೆದುಕೊಂಡಿದ್ದಾರೆ,ಉಳಿದ 30 ಲಕ್ಷ ಫಲಾನುಭವಿಗಳಿಗೆ ಶೀಘ್ರವೇ ಗ್ಯಾಸ್ ಸಂಪರ್ಕ ಸಿಗಲಿದೆ. ಇದಕ್ಕಾಗಿ ಸರ್ಕಾರ 200 ಕೋಟಿ ರು ಹಣ ಮೀಸಲಿರಿಸಿದೆ ಎಂದು ಹೇಳಿದ್ದಾರೆ.
ಉಚಿತವಾಗಿ ಎಲ್ ಪಿಜಿ ಸ್ಟವ್, ರೆಗ್ಯುಲೇಟರ್, ರಬ್ಬರ್ ಟ್ಯೂಬ್ ಗಾಗಿ ರಾಜ್ಯ ಸರ್ಕಾರ ಪ್ರತಿ ಫಲಾನುಭವಿಗೆ 2,940 ರು ಖರ್ಚು ಮಾಡುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕLPGDharmendra Pradhanಧರ್ಮೇಂದ್ರ ಪ್ರಧಾನ್ಎಲ್ ಪಿಜಿMukhya Mantri Anila Bhagya schemeಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


