ಜಂತಕಲ್ ಮೈನಿಂಗ್ ಪ್ರಕರಣ: ಜೂ.28ರವರೆಗೆ ಎಚ್ ಡಿಕೆ ಬಂಧಿಸದಂತೆ ಹೈಕೋರ್ಟ್ ಆದೇಶ
ಜಂತಕಲ್ ಮೈನಿಂಗ್ ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ. ಕುಮಾರಸ್ವಾಮಿ....

Published On :
ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ. ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದ್ದು, ಜೂನ್ 28ರವರೆಗೆ ಅವರನ್ನು ಬಂಧಿಸದಂತೆ ಎಸ್ ಐಟಿಗೆ ಮಂಗಳವಾರ ಆದೇಶಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಎಚ್ ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಜೂನ್ 28ರವರೆಗೆ ಕುಮಾರಸ್ವಾಮಿ ಅವರನ್ನು ಬಂಧಿಸದಂತೆ ಎಸ್ಐಟಿಗೆ ಆದೇಶ ನೀಡಿದೆ. ಅಲ್ಲದೆ ಎಸ್ ಐಟಿ ತನಿಖೆಗೆ ಸಹಕರಿಸುವಂತೆ ಮಾಜಿ ಸಿಎಂಗೆ ಸೂಚಿಸಿದೆ.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಎಸ್ ಐಟಿ ಪರ ವಕೀಲರು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೂರನೇ ಆರೋಪಿಯಾದ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ ಎಂದರು. ಆದರೆ ಎಸ್ಐಟಿ ವಾದ ತಳ್ಳಿಹಾಕಿದ ಕೋರ್ಟ್ ವಿಚಾರಣೆಯನ್ನು ಮುಂದಿನ ಮಂಗಳವಾರಕ್ಕೆ ಮುಂದೂಡಿದೆ.
ಜಂತಕಲ್ ಮೈನಿಂಗ್ ಗುತ್ತಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಎಸ್ಐಟಿ ವಿಶೇಷ ನ್ಯಾಯಾಲಯ ಕುಮಾರಸ್ವಾಮಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೇ 150 ಕೋಟಿ ರು. ಗಣಿ ಲಂಚ ಸ್ವೀಕರಿಸಿರುವುದಾಗಿ ಆರೋಪಿಸಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಎಸ್ಐಟಿಗೆ ಸಾಕ್ಷ್ಯಾಧಾರಗಳನ್ನು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ಕಳೆದ ವಾರ ಹೈಕೋರ್ಟ್ ಜೂನ್ 20ರವರೆಗೆ ಬಂಧಿಸದಂತೆ ಮಧ್ಯಂತ ಆದೇಶ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
KumaraswamyHigh Courtಹೈಕೋರ್ಟ್ಎಚ್ ಡಿ ಕುಮಾರಸ್ವಾಮಿJantakal mining caseಜಂತಕಲ್ ಮೈನಿಂಗ್ ಪ್ರಕರಣnot to arrestಬಂಧಿಸಬೇಡಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


