ಮೈನಿಂಗ್ ಹಗರಣ: ಐಎಎಸ್ ಅಧಿಕಾರಿ ಮಹೇಂದ್ರ ಜೈನ್ ಜಾಮೀನು ಅರ್ಜಿ ವಜಾ
ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಎಎಸ್ ಅಧಿಕಾರಿ ಮಹೇಂದ್ರ ಜೈನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ...

Published On :
ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಎಎಸ್ ಅಧಿಕಾರಿ ಮಹೇಂದ್ರ ಜೈನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.
ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ಗೆ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.
ವಿಚಾರಣೆಗೆ ಹಾಜರಾದರೆ ಎಸ್‌ಐಟಿ ಅಧಿಕಾರಿಗಳು ಬಂಧಿಸಬಹುದು ಎಂಬ ಭೀತಿಯಿಂದ ಮಹೇಂದ್ರ ಜೈನ್ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಲೋಕಾಯುಕ್ತ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಲು ಮಹೇಂದ್ರ ಜೈನ್ ನಿರ್ಧರಿಸಿದ್ದಾರೆ.
ಈಗಾಗಲೇ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯೂ ಕೂಡ ಲೋಕಾ ಕೋರ್ಟ್‌ನಲ್ಲಿ ವಜಾಗೊಂಡಿತ್ತು. ಇಂದು ಜಂತಕಲ್ ಮೈನಿಂಗ್ ಹಗರಣದ ಸಂಬಂಧ ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bail pleaಜಾಮೀನು ಅರ್ಜಿಲೋಕಾಯುಕ್ತ ಕೋರ್ಟ್Lokayukta special courtmining scamಗಣಿ ಹಗರಣMahendra Jainಮಹೇಂದ್ರ ಜೈನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


