ರಾಜ್ಯ ಸರ್ಕಾರದಿಂದ ರೈತರ ಸಹಕಾರಿ ಬ್ಯಾಂಕ್ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ
ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ. ವರೆಗಿನ ರೈತರ ಸಾಲಮನ್ನಾ ಮಾಡುವುದಾಗಿ ಘೋಷಿಸಿದೆ.

Published On :
ಬೆಂಗಳೂರು: ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ. ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ. ವರೆಗಿನ ರೈತರ ಸಾಲಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಜೂನ್ 20 ರ ವರೆಗಿನ ಪ್ರತಿ ರೈತರ ಸಾಲ ಮನ್ನಾ ಮಾಡುವುದಾಗಿ ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಲಮನ್ನಾದಿಂದ 22,227,506 ರಾಜ್ಯದ ರೈತರಿಗೆ ಅನುಕೂಲವಾಗಲಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ 8,165 ಕೋಟಿ ರು ಹೊರೆಯಾಗಲಿದೆ.
ರೈತರ ಸಾಲಮನ್ನಾ ಮಾಡುವಂತೆ ಬಿಜೆಪಿ ಹಲವು ದಿನಗಳಿಂದ ಪಟ್ಟು ಹಿಡಿದಿತ್ತು. ಸಾಲ ಮನ್ನಾ ಮಾಡದಿದ್ದರೇ ಬೃಹತ್ ಹೋರಾಟ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKarnatakaಕರ್ನಾಟಕಸಾಲ ಮನ್ನಾFarmerರೈತರುloan waiverಸಹಕಾರಿ ಬ್ಯಾಂಕ್Co-operative bank
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


