ರಾಜ್ಯ

ಬಳ್ಳಾರಿಯಲ್ಲಿ ಬಿಜೆಪಿ ಮುಖಂಡ ಬಂಡಿ ರಮೇಶ್ ಬರ್ಬರ ಹತ್ಯೆ

ಬಳ್ಳಾರಿ ಜಿಲ್ಲಾ ಬಿಜೆಪಿ ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಬಂಡಿ ರಮೇಶ್‌(35) ಅವರನ್ನು ಗುರುವಾರ ಗುಗ್ಗರ ಹಟ್ಟಿ ಸಮೀಪದ ಡಾಬಾವೊಂದದಲ್ಲಿ....

ಬಳ್ಳಾರಿಯಲ್ಲಿ ಬಿಜೆಪಿ ಮುಖಂಡ ಬಂಡಿ ರಮೇಶ್ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Published On :
ಬಳ್ಳಾರಿ: ಬಳ್ಳಾರಿ ಜಿಲ್ಲಾ ಬಿಜೆಪಿ ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಬಂಡಿ ರಮೇಶ್‌(35) ಅವರನ್ನು ಗುರುವಾರ ಗುಗ್ಗರ ಹಟ್ಟಿ ಸಮೀಪದ ಡಾಬಾವೊಂದದಲ್ಲಿ  ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಬಳ್ಳಾರಿ ನಗರ ನಿವಾಸಿಯಾಗಿದ್ದ ಬಿಜೆಪಿ ಮುಖಂಡ ಬಂಡಿ ರಮೇಶ್‌ ಅವರು ಕೊಲೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿ ಬಂದಿದ್ದರು ಎನ್ನಲಾಗಿದೆ. 
ಬಿಜೆಪಿ ಸಂಸದ ಶ್ರೀರಾಮುಲು ಹಾಗೂ ಮಾಜಿ ಶಾಸಕ ಸೋಮಶೇಖರ ರೆಡ್ಡಿ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಂಡಿ ರಮೇಶ್ ಅವರ ಹತ್ಯೆಗೆ ಹಳೆ ದ್ವೇಷ ಕಾರಣ ಎನ್ನಲಾಗಿದೆ.
ಬಳ್ಳಾರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.