ಪಾಕ್ ಗೆಲುವಿಗೆ ಸಂಭ್ರಮ: ಕೊಡಗಿನ ಮೂವರು ಯುವಕರಿಗೆ ಜೈಲೇ ಗತಿ
ಲಂಡನ್ ನಲ್ಲಿ ನಡೆದ ಚ್ಯಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದ್ದಕ್ಕಾಗಿ ಪಟಾಕಿ....

Published On :
ಬೆಂಗಳೂರು: ಲಂಡನ್ ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದ್ದಕ್ಕಾಗಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದ್ದ ಕೊಡಗು ಜಿಲ್ಲೆಯ ಮೂವರು ಮುಸ್ಲಿಂ ಯುವಕರು ಈಗ ಜೈಲು ಪಾಲಾಗಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆತಂದ ಆರೋಪದ ಮೇಲೆ ಕಳೆದ ಸೋಮವಾರ ಬಂಧನಕ್ಕೊಳಗಾಗಿರುವ ಮೂವರು ಯುವಕರ ವಿರುದ್ದ ಜಾಮೀನು ರಹಿತ ಪ್ರಕರಣದಡಿ ಕೇಸ್ ದಾಖಲಿಸಿರುವುದರಿಂದ ಅವರಿಗೆ ಜಾಮೀನು ಸಿಗಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸುತ್ತಿದ್ದಂತೆ ಕುಶಾಲನಗರ ಹೆದ್ದಾರಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಝಹೀರ್, ರಿಯಾಜ್, ಅಬ್ದುಲ್ ಸಮ್ಮದ್ ಹಾಗೂ ಮುನೀರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಮೂವರನ್ನು ಬಂಧಿಸಲಾಗಿದೆ. ಆದರೆ ಮುನೀರ್ ತಪ್ಪಿಸಿಕೊಂಡಿದ್ದಾನೆ ಎಂದು ಕೊಡಗು ಹಿರಿಯ ಪೊಲೀಸ್ ಅಧಿಕಾರಿ ರಾಜೇಂದ್ರ ಪ್ರಸಾದ್ ಅವರು ಹೇಳಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ನಲ್ಲಿ ಪಾಕಿಸ್ತಾನ ತಂಡ ಗೆಲುವು ಸಾಧಿಸಿದ ಬೆನ್ನಲ್ಲೇ ಕಾಶ್ಮೀರದಲ್ಲಿ ನಡೆದ ಸಂಭ್ರಮಾಚರಣೆ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಅಂತುಹುದೇ ಪ್ರಕರಣಗಳು ಕರ್ನಾಕದಲ್ಲೂ ಬೆಳಕಿಗೆ ಬಂದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Crimeಚಾಂಪಿಯನ್ಸ್ ಟ್ರೋಫಿChampions TrophyಅಪರಾಧKodaguಕರ್ನಾಟಕ ಪೊಲೀಸ್ಕೊಡಗುcelebrating PakIstan’s victoryಪಾಕಿಸ್ತಾನ ಗೆಲುವಿನ ಸಂಭ್ರಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


