ರವಿ ಬೆಳಗೆರೆ ಸೇರಿ ಇಬ್ಬರು ಪತ್ರಕರ್ತರಿಗೆ 1 ವರ್ಷ ಜೈಲು ಶಿಕ್ಷೆ: ವಿಧಾನಸಭೆ ಒಪ್ಪಿಗೆ
ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಪತ್ರಿಕೆ ಸಂಪಾದಕ ಅನಿಲ್ ರಾಜ್ ಗೆ ಸ್ಪೀಕರ್ ಕೆ.ಬಿ. ಕೋಳಿವಾಡ 1 ವರ್ಷ ಶಿಕ್ಷೆ ...

Published On :
ಬೆಂಗಳೂರು: ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಪತ್ರಿಕೆ ಸಂಪಾದಕ ಅನಿಲ್ ರಾಜ್ ಗೆ ಸ್ಪೀಕರ್ ಕೆ.ಬಿ. ಕೋಳಿವಾಡ 1 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ.
ಶಾಸಕ ನಾಗರಾಜ್ ಹಾಗೂ ಕೆ.ಬಿ. ಕೋಳಿವಾಡ ವಿರುದ್ಧ ಅವಹೇಳನಕಾರಿಯಾಗಿ ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಹಕ್ಕು ಬಾಧ್ಯತಾ ಸಮಿತಿಯಲ್ಲಿ ಪತ್ರಿಕೆ ಸಂಪಾದಕರ ವಿರುದ್ಧ ದೂರು ನೀಡಲಾಗಿ. ದೂರಿನನ್ವಯ ಸಮಿತಿಯು ರವಿ ಬೆಳಗೆರೆ ಅವರಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸುವಂತೆ ಶಿಫಾರಸು ಮಾಡಿತ್ತು. ಸಮಿತಿಯ ಶಿಫಾರಸಿನಂತೆ ಅವರ ವಿರುದ್ಧ 1 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಬೇಕೆಂದು ಸದನದಲ್ಲಿ ಪಕ್ಷಭೇದ ಮರೆತು ಶಾಸಕರು ಒತ್ತಾಯ ಮಾಡಿದರು.
ಸದನದ ಒಪ್ಪಿಗೆಯ ಹಿನ್ನೆಲೆಯಲ್ಲಿ ಸ್ಪೀಕರ್ ಕೆ.ಬಿ. ಕೋಳಿವಾಡ ಶಿಕ್ಷೆ ಘೋಷಿಸಿದ್ದಾರೆ. ಅದೇ ರೀತಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ವಿರುದ್ಧ ಯಲಹಂಕ ವಾಯ್ಸ್ ಪತ್ರಿಕೆಯಲ್ಲಿ ನಿರಂತರವಾಗಿ ಅವಹೇಳಕಾರಿಯಾಗಿ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಹಕ್ಕುಚ್ಯುತಿ ಮಂಡಿಸಿದ್ದರು.
ಪತ್ರಿಕೆ ಸಂಪಾದಕರು ಸದನವನ್ನೇ ಅವಮಾನಿಸುವ ರೀತಿಯಲ್ಲಿ ವರದಿ ಗಳನ್ನು ಪ್ರಕಟಿಸುತ್ತಿದ್ದಾರೆ. ಈ ರೀತಿಯ ಪತ್ರಕರ್ತರಿಂದ ಇಡೀ ಪತ್ರಕರ್ತರ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಈ ರೀತಿಯ ಬ್ಲಾಕ್ ಮೇಲ್ ಮಾಡುವ ಪತ್ರಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
2014ರ ಸೆಪ್ಟಂಬರ್ ತಿಂಗಳ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸ್ಪೀಕರ್ ಕೋಳಿವಾಡ ಸೇರಿದಂತೆ ಹಲವು ರಾಜಕಾರಣಿಗಳ ವಿರುದ್ಧ ಲೇಖನ ಪ್ರಕಟವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
assemblyವಿಧಾನಸಭೆjournalistsಪತ್ರಕರ್ತರುರವಿ ಬೆಳಗೆರೆಕೆ.ಬಿ ಕೋಳಿವಾಡK B KoliwadRavi Belagere1 year sentenced1 ವರ್ಷ ಶಿಕ್ಷೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


