ಮಲ್ಲೇಶ್ವರಂ ಬಾಂಬ್ ಸ್ಫೋಟ ಸಂತ್ರಸ್ತೆ ಲಿಷಾಗೆ ಸರ್ಕಾರಿ ನೌಕರಿ
ಮಲ್ಲೇಶ್ವರಂ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿ. ಲಿಷಾಗೆ ಸಿ ದರ್ಜೆ ನೌಕರಿ ನೀಡಲು ರಾಜ್ಯ ಸರ್ಕಾರ ..

Published On :
ಬೆಂಗಳೂರು: ಮಲ್ಲೇಶ್ವರಂ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿ. ಲಿಷಾಗೆ ಸಿ ದರ್ಜೆ ನೌಕರಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ನಡೆದ ಬಾಂಬ್‌ಸ್ಫೋಟದಲ್ಲಿ ಲಿಷಾ ಕಾಲಿಗೆ ಗಂಭೀರ ಗಾಯವಾಗಿತ್ತು. ಉದ್ಯೋಗ ನೀಡುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸರ್ಕಾರ ಅದನ್ನು ಪಾಲಿಸಿಲ್ಲ ಎಂದು ಆಕ್ಷೇಪಿಸಿ ಲಿಷಾ ಅವರು ಇತ್ತೀಚೆಗಷ್ಟೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದರು.
ಲಿಷಾಗೆ 17 ವರ್ಷವಾಗಿದ್ದಾಗ ಏಪ್ರಿಲ್ 2013 ರಂದು ಬಾಂಬ್ ದಾಳಿ ನಡೆದಿತ್ತು. ಟ್ಯೂಷನ್ ಗೆ ತೆರಳಿ ವಾಪಸ್ ಬರುವಾಗ ನಡೆದ ದಾಳಿಯಲ್ಲಿ ಲಿಷಾ ಗಾಯಗೊಂಡಿದ್ದಳು.
ಇನ್ನೂ ಅಪಘಾತದಲ್ಲಿ ಮೃತಪಟ್ಟಿದ್ದ ಲೋಕಾಯುಕ್ತ ಎಸ್‌ಪಿ ರವಿಕುಮಾರ್ ಅವರ ಪತ್ನಿಗೆ ಅನುಕಂಪದ ಆಧಾರದಲ್ಲಿ ಉಪ ನೋಂದಣಾಧಿಕಾರಿ ಹುದ್ದೆ ನೀಡಲು ಸರ್ಕಾರ ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Government Jobಮಲ್ಲೇಶ್ವರಂ ಬಾಂಬ್ ಸ್ಫೋಟLishaMalleswaram bomb blastಸರ್ಕಾರಿ ನೌಕರಿState cabinetಲಿಷಾರಾಜ್ಯ ಸಂಪುಟ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


