ಐಐಎಸ್ಇಆರ್ ನಿಂದ ಸಾಮಾಜಿಕ ಆರ್ಥಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸಾಮಾಜಿಕ ಆರ್ಥಿಕ ಸುಧಾರಣೆಗಳ ಅಂತಾರಾಷ್ಟ್ರೀಯ ಸಂಸ್ಥೆಯ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ಕೊಡಮಾಡಲಾಗುವ ರಾಷ್ಟ್ರೀಯ ಪ್ರಶಸ್ತಿಯನ್ನು ಜೂ.24 ರಂದು ನಗರದ ಎಡಿಎ ರಂಗಮಂದಿರದಲ್ಲಿ ಪ್ರದಾನ ಮಾಡಲಾಯಿತು.

Published On :
ಬೆಂಗಳೂರು: ಸಾಮಾಜಿಕ ಆರ್ಥಿಕ ಸುಧಾರಣೆಗಳ ಅಂತಾರಾಷ್ಟ್ರೀಯ ಸಂಸ್ಥೆಯ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ಕೊಡಮಾಡಲಾಗುವ ರಾಷ್ಟ್ರೀಯ ಪ್ರಶಸ್ತಿಯನ್ನು ಜೂ.24 ರಂದು ನಗರದ ಎಡಿಎ ರಂಗಮಂದಿರದಲ್ಲಿ ಪ್ರದಾನ ಮಾಡಲಾಯಿತು.
ಸಾಮಾಜಿಕ ಆರ್ಥಿಕ ಸುಧಾರಣೆಗಳಲ್ಲಿ ಸಾಧನೆ ಮಾಡಿದ ದೇಶದ ವಿವಿಧ ಭಾಗಗಳ 30 ಜನರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನಿಂದ ಪತ್ರಕರ್ತೆ, ನಿರೂಪಕಿ ಸ್ವಾತಿ ಚಂದ್ರಶೇಖರ್, ದಾವಣಗೆರೆಯಿಂದ ಗಂಗಾಧರಯ್ಯ ಹಿರೇಮಠ್, ರೋಣದಿಂದ ಮಹದೇವಪ್ಪ ಹಿರಿಜನ್, ಗುಂಟೂರಿನಿಂದ ಸರಸ್ವತಿ ರಾಜು ಅಯ್ಯರ್ ಸೇರಿದಂತೆ ಒಟ್ಟು 30 ಜನರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ವೇಳೆ ಮೈಕಾನ್ ನಿರ್ಮಾಣ ಸಂಸ್ಥೆಯಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಖರೀದಿ ವಿಭಾಗದ ವ್ಯವಸ್ಥಾಪಕ ಪುಟ್ಟ ನಾಯ್ಕ್ ಅವರಿಗೂ ಸನ್ಮಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕಿರುತೆರೆ, ಸ್ಯಾಂಡಲ್ ವುಡ್ ನಿರ್ದೇಶಕ ಟಿ.ಎನ್ ಸೀತಾರಾಮ್, ನಟಿ ಭವಾನಿ ಪ್ರಕಾಶ್, ನೀತಿ ಆಯೋಗದಲ್ಲಿ ಆರ್ಥಿಕ ಸಲಹೆಗಾರರಾಗಿರುವ ಡಾ. ಹೆಚ್ ವಿ ಶಿವಪ್ಪ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


