ಬಂಧನಕ್ಕೂ ಮುನ್ನ ಪೊಲೀಸರ ಕಣ್ತಪ್ಪಿಸಿ ಆಸ್ಪತ್ರೆಯಿಂದ ರವಿ ಬೆಳಗೆರೆ ನಾಪತ್ತೆ!
ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಪ್ರಕರಣ ಸಂಬಂಧ ವಿಧಾನಸಭೆ ಹಕ್ಕು ಬಾಧ್ಯತೆ ಸಮಿತಿಯಿಂದ 1 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ‘ಹಾಯ್ ಬೆಂಗಳೂರು...

Published On :
ಬೆಂಗಳೂರು: ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಪ್ರಕರಣ ಸಂಬಂಧ ವಿಧಾನಸಭೆ ಹಕ್ಕು ಬಾಧ್ಯತೆ ಸಮಿತಿಯಿಂದ 1 ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ‘ಹಾಯ್ ಬೆಂಗಳೂರು’ ಪತ್ರಿಕೆ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ರವಿ ಬೆಳಗೆರೆ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಿಂದ ಪೊಲೀಸರ ಕಣ್ತಪ್ಪಿಸಿ ನಾಪತ್ತೆಯಾಗಿದ್ದಾರೆ.
ರವಿ ಬೆಳಗೆರೆ ಬಂಧನಕ್ಕೆ ಕಾಯುತ್ತಿದ್ದ ಪೊಲೀಸರು ಆಸ್ಪತ್ರೆಯಿಂದ ಹೊರಗೆ ಬಂದಿದ್ದ ಬೆಳಗೆರೆ ಅವರನ್ನು ವಶಕ್ಕೆ ಪಡೆಯಬೇಕು ಎನ್ನುವಷ್ಟರಲ್ಲಿ ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾರೆ. ರವಿ ಬೆಳಗೆರೆ ಅಜ್ಞಾತ ಸ್ಥಳಕ್ಕೆ ತೆರಳಿದ್ದು, ಪೊಲೀಸರು ಅವರ ಪತ್ತೆಗಾಗಿ ಪ್ರಯತ್ನ ನಡೆಸುತ್ತಿದ್ದಾರೆ.
ಸ್ಪೀಕರ್ ಕೋಳಿವಾಡ ಅವರ ಆದೇಶ ಪ್ರಶ್ನಿಸಿ ಬೆಳಗೆರೆ ಹೈಕೋರ್ಟ್ ಮೆಟ್ಟೇಲೇರಲ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇನ್ನು ಈ ಸಂಬಂಧ ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಇದುವರೆಗೂ ಪತ್ರಕರ್ತ ರವಿ ಬೆಳಗೆರೆ ಅವರನ್ನು ಬಂಧಿಸಲಾಗಿಲ್ಲ, ನಗರ ಪೊಲೀಸ್ ತಂಡವೊಂದು ಬೆಳಗೆರೆ ಅವರನ್ನು ಬಂಧಿಸಲು ಧಾರವಾಡಕ್ಕೆ ತೆರಳಿತ್ತು. ರವಿ ಬೆಳಗೆರೆ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಇನ್ನು ಚಿಕಿತ್ಸೆ ಅಗತ್ಯವಿದೆ ಎಂದು ಹೇಳಿದ್ದರೂ, ಆದರೆ ಅಷ್ಟರಲ್ಲಾಗಲೇ ಅವರು ಆಸ್ಪತ್ರೆಯಿಂದ ಹೊರ ನಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಯಲಹಂಕ ವಾಯ್ಸ್ ಪತ್ರಿಕೆಯ ಸಂಪಾದಕ ಅನಿಲ್ ರಾಜ್ ತಲೆಮರೆಸಿಕೊಂಡಿದ್ದು, ಆದಷ್ಟು ಬೇಗ ಅವರನ್ನು ಪತ್ತೆ ಹಚ್ಚುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Dharwadಧಾರವಾಡನಾಪತ್ತೆmissingರವಿ ಬೆಳಗೆರೆRavi BelagereSDM Medical College Hospitalಎಸ್ ಡಿಎಂ ಮೆಡಿಕಲ್ ಕಾಲೇಜು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


