ರಾಜ್ಯ

ಜೈಲು ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ರವಿ ಬೆಳಗೆರೆ

ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಕ್ಕು ಬಾಧ್ಯತೆ ಸಮಿತಿಯಿಂದ....

ಜೈಲು ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ರವಿ ಬೆಳಗೆರೆ
ರವಿ ಬೆಳಗೆರೆ
Published On :
ಬೆಂಗಳೂರು: ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಕ್ಕು ಬಾಧ್ಯತೆ ಸಮಿತಿಯಿಂದ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿರಿಯ ಪತ್ರಕರ್ತರಾದ ರವಿ ಬೆಳಗೆರೆ ಹಾಗೂ ಅನಿಲ್‌ ರಾಜ್‌ ಅವರು ತಮ್ಮ ಶಿಕ್ಷೆಗೆ ತಡೆ ಕೋರಿ ಮಂಗಳವಾರ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಜೈಲು ಶಿಕ್ಷೆ ನೀಡುವ ಅಧಿಕಾರ ವಿಧಾನಸಭೆ ಹಕ್ಕು ಬಾಧ್ಯತೆ ಸಮಿತಿಗೆ ಇಲ್ಲ. ತಮಗೆ ನೀಡಿರುವ ಜೈಲು ಶಿಕ್ಷೆ ಅಸಂವಿಧಾನಿಕ ಮತ್ತು ತಮ್ಮ ಅಭಿಪ್ರಾಯ ಮಂಡಿಸಲು ಅವಕಾಶ ನೀಡಿಲ್ಲ. ಹೀಗಾಗಿ ಹಕ್ಕು ಬಾಧ್ಯತಾ ಸಮಿತಿ ನೀಡಿರುವ ಶಿಕ್ಷೆಗೆ ತಡೆ ನೀಡಬೇಕು ಎಂದು ಇಬ್ಬರು ಪತ್ರಕರ್ತರು ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ರವಿ ಬೆಳಗೆರೆ ಅವರು ಸದ್ಯ ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಮ್ಮ ವಕೀಲರ ಮೂಲಕ ಇಂದು ಹೈಕೋರ್ಟ್ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಶಾಸಕ ನಾಗರಾಜ್‌ ಹಾಗೂ ಕೆ.ಬಿ. ಕೋಳಿವಾಡ  ವಿರುದ್ಧ ಅವಹೇಳನಕಾರಿಯಾಗಿ ಸುದ್ದಿ ಪ್ರಕಟಿಸಿದ ಆರೋಪದ ಮೇಲೆ ಸ್ಪೀಕರ್‌ ಕೆ.ಬಿ. ಕೋಳಿವಾಡ ಅವರು ಹಾಯ್‌ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಪತ್ರಿಕೆ ಸಂಪಾದಕ ಅನಿಲ್‌ ರಾಜ್‌ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರು. ದಂಡ ವಿಧಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.