ಪೇಜಾವರ ಶ್ರೀಗಳಿಂದ ಹಿಂದೂ ಸಮಾಜಕ್ಕೆ ಅವಮಾನ: ಪ್ರಮೋದ್ ಮುತಾಲಿಕ್ ಆಕ್ರೋಶ
ಪೇಜಾವರ ಶ್ರೀಗಳು ಮಠದಲ್ಲಿ ನಮಾಜ್ ಮಾಡಲು ಅವಕಾಶ ನೀಡಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಶ್ರೀರಾಮ ...

Published On :
ಹುಬ್ಬಳ್ಳಿ: ಶ್ರೀ ಕೃಷ್ಣ ಮಠ ಹಿಂದೂಗಳ ಪವಿತ್ರ ಕ್ಷೇತ್ರವಾಗಿದ್ದು ಅದರ ಪಾವಿತ್ರ್ಯತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಆದರೆ ಪೇಜಾವರ ಶ್ರೀಗಳು ಮಠದಲ್ಲಿ ನಮಾಜ್ ಮಾಡಲು ಅವಕಾಶ ನೀಡಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಹಿಂದೂ ಸಮಾಜವನ್ನು ಅವಮಾನಿಸಿದ್ದಾರೆ. ಅವರ ಧೋರಣೆ ಖಂಡಿಸಿ ಜುಲೈ 2 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಇಫ್ತಾರ್‌ಕೂಟದ ಕುರಿತು ಸಮರ್ಥನೆ ವೇಳೆ ಹಿಂದೂಗಳೂ ಗೋಮಾಂಸ ಸೇವಿಸುತ್ತಾರೆ ಎಂದು ಶ್ರೀಗಳು ಹೇಳಿಕೆ ನೀಡಿದ್ದು ಆ ಹೇಳಿಕೆ ಹಿಂಪಡೆಯಬೇಕು ಎಂದು ಮುತಾಲಿಕ್ ಆಗ್ರಹಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


