ರಾಜ್ಯ

ಕೈಕೊಟ್ಟ ಮುಂಗಾರು- ಮೋಡ ಬಿತ್ತನೆಗೆ ಸರ್ಕಾರದ ಸಿದ್ಧತೆ: ಕಾಗೋಡು ತಿಮ್ಮಪ್ಪ

ಈ ವರ್ಷವೂ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಬರಗಾಲ ಕಾಡುವ ಸಾಧ್ಯತೆ ಇದೆ ಎಂದು ...

ಕೈಕೊಟ್ಟ ಮುಂಗಾರು- ಮೋಡ ಬಿತ್ತನೆಗೆ ಸರ್ಕಾರದ ಸಿದ್ಧತೆ: ಕಾಗೋಡು ತಿಮ್ಮಪ್ಪ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಈ ವರ್ಷವೂ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಬರಗಾಲ ಕಾಡುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
‘ಆರಿದ್ರಾ ಮಳೆ ಚೆನ್ನಾಗಿ ಬರಬೇಕಿತ್ತು. ಆದರೆ, ಮಲೆನಾಡಿನಲ್ಲಿ ಮಳೆಯೇ ಆಗಿಲ್ಲ. ಕೊಡಗು, ಕರಾವಳಿ, ಉತ್ತರ ಕರ್ನಾಟಕದ ಕೆಲವು ಕಡೆ ಅಲ್ಪಸ್ವಲ್ಪ ಮಳೆಯಾಗಿದೆ. ಸುರಿದಿರುವ ಮಳೆ ಪ್ರಮಾಣ ಗಮನಿಸಿದರೆ ಈ ವರ್ಷವೂ ಬರಗಾಲದ  ಆತಂಕ ಎದುರಾಗಿದೆ’ ಎಂದು ಹೇಳಿದ್ದಾರೆ.ಮೋಡ ಬಿತ್ತನೆಗಾಗಿ 400 ಕೋಟಿ ರು ವೆಚ್ಚದ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಈ ವರ್ಷ ಮಳೆ ಸರಿಯಾಗಿ ಬೀಳದ ಕಾರಣ ಕೃಷಿ ಸಚಿವ ಕೃಷ್ಣ ಬೈರೈಗೌಡ ನೇತೃತ್ವದ ನಿಯೋಗವೊಂದು ಗೃಹಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ 800 ಕೋಟಿ ರು. ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಮನವಿ ಮಾಡುವುದಾಗಿ ತಿಳಿಸಿದ್ದಾರೆ..
ಇನ್ನು ಚಿತ್ರದುರ್ಗದಲ್ಲಿ ಮಾತನಾಡಿದ ಕೃಷ್ಣ ಬೈರೇಗೌಡ, ಜುಲೈ ಕೊನೆಯ ವಾರದಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭಿಸಲಾಗುವುದು. ಈ ವಿಷಯ ಸಂಬಂಧ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿರಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.