5,912 ಕೋಟಿ ರು. ವೆಚ್ಚದ ಮೇಕೆದಾಟು ಯೋಜನೆ: ಒಪ್ಪಿಗೆ ಕೋರಿ ಜಲ ಆಯೋಗಕ್ಕೆ ರಾಜ್ಯ ಸರ್ಕಾರದ ಪತ್ರ
ಮೇಕೆದಾಟು ಕುಡಿಯುವ ನೀರು ಮತ್ತು ಜಲವಿದ್ಯುತ್ ಯೋಜನೆಗಳಿಗೆ ಅನುಮತಿ ನೀಡುವಂತೆ ಕೋರಿ ರಾಜ್ಯ ಜಲಸಂಪನ್ಮೂಲ ಇಲಾಖೆ ಕೇಂದ್ರ ಜಲ...

Published On :
ಬೆಂಗಳೂರು: ಮೇಕೆದಾಟು ಕುಡಿಯುವ ನೀರು ಮತ್ತು ಜಲವಿದ್ಯುತ್ ಯೋಜನೆಗಳಿಗೆ ಅನುಮತಿ ನೀಡುವಂತೆ ಕೋರಿ ರಾಜ್ಯ ಜಲಸಂಪನ್ಮೂಲ ಇಲಾಖೆ ಕೇಂದ್ರ ಜಲ ಆಯೋಗಕ್ಕೆ ಪತ್ರ ಬರೆದಿದೆ.
ಬೆಂಗಳೂರಿನಿಂದ 90 ಕಿಮೀ ದೂರದಲ್ಲಿರುವ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ 65 ಟಿಎಂಸಿ ನೀರು ಸಂಗ್ರಹಾ ಸಾಮರ್ಥ್ಯವುಳ್ಳ ಜಲಾಶಯ ನಿರ್ಮಾಣಕ್ಕೆ 5,912 ಕೋಟಿ ರು ವೆಚ್ಚದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದು ಅನುಮೋದನೆಗಾಗಿ ಕೋರಲಾಗಿದೆ.
ಬೆಂಗಳೂರು ಮತ್ತು ಇತರೆ ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವದರ ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಕೂಡ ಉತ್ಪಾದಿಸಬಹುದಾಗಿದೆ.
ಈ ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತ ಪಡಿಸುತ್ತಿದೆ. ವಾರ್ಷಿಕವಾಗಿ ತಮಿಳುನಾಡಿಗೆ 192 ಟಿಎಂಸಿ ಅಡಿ ನೀರು ಬಿಡಲಾಗುತ್ತದೆ. ಜೊತೆಗೆ ಮಳೆಗಾಲದ ಸಂದರ್ಭದಲ್ಲಿ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗುತ್ತದೆ. ಹಾಗಾಗಿ ಅಂತಹ ಸಂದರ್ಭದಲ್ಲಿ ನೀರನ್ನು ಸಂಗ್ರಹಿಸಿ, ಮೈಸೂರು, ಬೆಂಗಳೂರು ನಗರಗಳಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಿಕೊಳ್ಳುವುದು ಯೋಜನೆ ಮುಖ್ಯ ಉದ್ದೇಶವಾಗಿದೆ.
30 ಟಿಎಂಸಿಯಿಂದ 260 ಟಿಎಂಸಿ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿಯುತ್ತದೆ, ಹೀಗಾಗಿ ಈ ಹೆಚ್ಚುವರಿ ನೀರನ್ನು ಸದುಪಯೋಗ ಪಡಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ.
ಅಂತರರಾಜ್ಯ ಜಲವಿವಾದ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಕಾರಣ, ರಾಜ್ಯ ಸರ್ಕಾರ ಸುಪ್ರೀಕೋರ್ಟ್ ಗೂ ಯೋಜನೆಯ ವಿಸ್ತೃತ ವರದಿಯನ್ನು ಸಲ್ಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
State Governmentರಾಜ್ಯ ಸರ್ಕಾರletterಪತ್ರಮೇಕೆದಾಟು ಯೋಜನೆmekedatu projectCentral Water Commissionಕೇಂದ್ರ ಜಲ ಆಯೋಗ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


