ಮುರಿದು ಬಿದ್ದ ಮದುವೆ: ಬೆಂಗಳೂರಿನಲ್ಲಿ ಯುವತಿ ಆತ್ಮಹತ್ಯೆ
ನಿಶ್ಚಿತಾರ್ಥ ನಂತರ ಯುವಕ ಮದುವೆಗೆ ನಿರಾಕರಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ...

ಬೆಂಗಳೂರು: ನಿಶ್ಚಿತಾರ್ಥ ನಂತರ ಯುವಕ ಮದುವೆಗೆ ನಿರಾಕರಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ ನಿವಾಸಿ ಗಳಾದ ದೇವಾನಂದ್ ಮತ್ತು ವಿಮಲಾ ಅವರ ಪುತ್ರಿ ನಾಗಲಕ್ಷ್ಮಿ (30)ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಂಬಿಎ ಪದವೀಧರೆಯಾಗಿದ್ದ ನಾಗಲಕ್ಷ್ಮಿ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಹೈದರಾಬಾದ್ ನ ಕಾರ್ತಿಕ್ ಎಂಬ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು. ಮಂಗಳವಾರ ತನ್ನ ಪೋಷಕರು ಹೊರಗೆ ಹೋಗಿದ್ದಾಗ ನಾಗಲಕ್ಷ್ಮಿ ಸೀಲಿಂಗ್ ಫ್ಯಾನ್ ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೇ 22 ರಂದು ನಾಗಲಕ್ಷ್ಮಿ ಮತ್ತು ಕಾರ್ತಿಕ್ ವಿವಾಹ ನಿಶ್ಚಯಗೊಂಡಿತ್ತು. ಒಂದು ವರ್ಷದ ಹಿಂದೆಯೇ ಇಬ್ಬರಿಗೂ ನಿಶ್ಚಿತಾರ್ಥವಾಗಿತ್ತು, ಇತ್ತೀಚೆಗೆ ಕಾರ್ತಿಕ್ ತಂದೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಂತರ ಕಾರ್ತಿಕ್ ಜ್ಯೋತಿಷಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಆ ಹುಡುಗಿ ಅದೃಷ್ಟ ಸರಿಯಿಲ್ಲ ಎಂದು ಜ್ಯೋತಿಷಿ ಹೇಳಿದ್ದಾರೆ. ಇದನ್ನು ಕಾರ್ತಿಕ್ ನಾಗಲಕ್ಷ್ಮಿಗೆ ತಿಳಿಸಿದ್ದಾನೆ, ಇದರಿಂದ ಬೇಸತ್ತು ನಾಗಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


