ವಾಟ್ಸ್'ಆಪ್'ನಲ್ಲಿ ಅಶ್ಲೀಲ ವಿಡಿಯೋ ಬಯಲು: ಮಹಿಳೆ ಆತ್ಮಹತ್ಯೆಗೆ ಶರಣು
ವಾಟ್ಸ್'ಆಪ್'ನಲ್ಲಿ ತನ್ನ ಅಶ್ಲೀಲ ವಿಡಿಯೋವನ್ನು ಹರಿಯಬಿಟ್ಟ ವಿಚಾರ ತಿಳಿದು ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ...

Published On :
ಮಂಡ್ಯ: ವಾಟ್ಸ್'ಆಪ್'ನಲ್ಲಿ ತನ್ನ ಅಶ್ಲೀಲ ವಿಡಿಯೋವನ್ನು ಹರಿಯಬಿಟ್ಟ ವಿಚಾರ ತಿಳಿದು ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆದಿದೆ.
ಸೀತಾ (25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸೀತಾ ಆರು ವರ್ಷಗಳ ಹಿಂದೆ ಪ್ರೀತಿಸಿ ಮಂಜು ಎಂಬುವವರನ್ನು ಮದುವೆಯಾಗಿದ್ದರು. ದಂಪತಿಗಳಿಗೆ 5 ವರ್ಷದ ಮಗುವಿತ್ತು.
ರೈಲ್ವೆ ಉದ್ಯೋಗಿಯಾಗಿದ್ದ ಮಂಡ್ಯ ತಾಲೂಕು ಹಳೇ ಬೂದನೂರಿನ ಅರ್ಜುನ್, ಸೀತಾ ಅವರ ಅಶ್ಲೀಲ ವಿಡಿಯೋ ತೆಗೆದಿದ್ದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಅದನ್ನು ಹರಿಬಿಟ್ಟದ್ದ.
ಅರ್ಜುನ್ ಹಾಗೂ ಮಂಜು ಆಪ್ತ ಸ್ನೇಹಿತರಾಗಿದ್ದು, ಆಗಾಗ ಮಂಜು ಅವರ ಮನೆಗೆ ಬಂದು ಹೋಗುತ್ತಿದ್ದ. ಅಲ್ಲದೆ, ಕಳೆದ ಮೂರು ವರ್ಷಗಳಿಂದಲೂ ಸೀತಾ ಹಾಗೂ ಅರ್ಜುನ್ ನಡುವೆ ಅಕ್ರಮ ಸಂಬಂಧವಿತ್ತು ಎಂದು ಅರ್ಜುನ್ ಅವರ ಕುಟುಂಬ ಸದಸ್ಯರು ಹೇಳಿದ್ದಾರೆ.
ಕೆಲ ತಿಂಗಳುಗಳಿಂದ ಸೀತಾ ಅರ್ಜುನ್ ನ್ನು ತಿರಸ್ಕರಿಸಲು ಆರಂಭಿಸಿದ್ದಳು. ಇದರಿಂದ ಕೆಂಡಾಮಂಡಲಗೊಂಡಿದ್ದ ಅರ್ಜುನ್ ಅಶ್ಲೀಲ ವಿಡಿಯೋವೊಂದನ್ನು ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಅಲ್ಲದೆ, ವಿಡಿಯೋವನ್ನು ವಾಟ್ಸ್ ಅಪ್ ನಲ್ಲಿ ಹರಿಬಿಟ್ಟಿದ್ದಾನೆ. ಈ ವಿಚಾರ ತಿಳಿದ ಸೀತಾ ತೀವ್ರ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಆಕೆ ಡೆತ್ ನೋಟ್ ನ್ನು ಬರೆದಿಟ್ಟಿದ್ದು, ತನ್ನ ಸಾವಿಗೆ ಅರ್ಜುನ್ ಕಾರಣ ಎಂದು ಹೇಳಿಕೊಂಡಿದ್ದಾಳೆ.
ಪ್ರಸ್ತುತ ಆರೋಪಿ ಅರ್ಜುನ್ ತಲೆಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಮದ್ದೂರು ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


