ರಾಜ್ಯ

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಶಿವರಾಜ್ ಕುಮಾರ್ ದಂಪತಿ ಖುಲಾಸೆ

ಕಳೆದ ಲೋಕಸಭಾ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ನಟ ಶಿವರಾಜಕುಮಾರ್, ಪತ್ನಿ ಗೀತಾ ಶಿವರಾಜ್....

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಶಿವರಾಜ್ ಕುಮಾರ್ ದಂಪತಿ ಖುಲಾಸೆ
ಶಿವರಾಜ್ ಕುಮಾರ್, ಗೀತಾ
Published On :
ಶಿವಮೊಗ್ಗ: ಕಳೆದ ಲೋಕಸಭಾ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ನಟ ಶಿವರಾಜಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಶ್ರೀಕಾಂತ್ ಅವರನ್ನು ಶಿವಮೊಗ್ಗ ಮೂರನೇ ಜೆಎಂಎಫ್‌ಸಿ ಕೋರ್ಟ್ ಶನಿವಾರ ಖುಲಾಸೆಗೊಳಿಸಿದೆ.
ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶೆ ಶ್ವೇತಾ ಅವರು, ಸಾಕ್ಷ್ಯಾಧಾರಗಳ ಕೊರೆತೆ ಹಿನ್ನೆಲೆಯಲ್ಲಿ ಈ ಮೂವರು ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪವನ್ನು ಕೈಬಿಟ್ಟಿದ್ದಾರೆ.
2014ರ ಏಪ್ರಿಲ್ 16ರಂದು ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಶ್ರೀಕಾಂತ್ ಅವರು ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಚುನಾವಣಾ ಅಧಿಕಾರಿಗಳು ಶಿವಮೊಗ್ಗ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣ ಸಂಬಂಧ ಶಿವರಾಜ್ ಕುಮಾರ್ ದಂಪತಿ ಹಲವು ಬಾರಿ ವಿಚಾರಣೆಗೆ ಹಾಜರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.