ಪಡಿತರ ಧಾನ್ಯ ಪಡೆಯಲು ಕೂಪನ್ ಕಡ್ಡಾಯವಲ್ಲ: ಯು.ಟಿ ಖಾದರ್
ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಪಡೆಯಲು ಇನ್ನುಂದೆ ಕೂಪನ್ ಕಡ್ಡಾಯವಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ ಖಾದರ್...

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಪಡೆಯಲು ಇನ್ನುಂದೆ ಕೂಪನ್ ಕಡ್ಡಾಯವಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್, ಕೂಪನ್ ವ್ಯವಸ್ಥೆಯಿಂದ ಕಾರ್ಡುದಾರರಿಗೆ ತೊಂದರೆ ಆಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಇನ್ನು ಮುಂದೆ ಕೂಪನ್ ಪಡೆದುಕೊಳ್ಳುವುದನ್ನು ಐಚ್ಛಿಕವನ್ನಾಗಿ ಮಾಡಲಾಗಿದೆ. ಕೂಪನ್ ಇಲ್ಲದವರು ತಮ್ಮ ಬಯೋಮೆಟ್ರಿಕ್ ಧೃಢೀಕರಣ ನೀಡಿ ನೇರವಾಗಿ ನ್ಯಾಯಬೆಲೆ ಅಂಗಡಿಗಳಲ್ಲೇ ಪಡಿತರವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಕೂಪನ್ ಬೇಕು ಅನ್ನುವವರು ಈಗಿರುವ ವ್ಯವಸ್ಥೆಯಲ್ಲೇ ಕೂಪನ್ ಮೂಲಕ ಪಡಿತರಧಾನ್ಯ ಪಡೆದುಕೊಳ್ಳುವ ಅವಕಾಶವಿರುತ್ತದೆ ಎಂದು ಸ್ಪಷ್ಟಪಡಿಸಿದರು. ಕಾರ್ಡುದಾರರು ಕೂಪನ್ ಪಡೆದುಕೊಳ್ಳಲು ಮೊದಲು ಸೇವಾ ಕೇಂದ್ರಗಳಿಗೆ ಹೋಗಬೇಕು. ಬಳಿಕ ನ್ಯಾಯಬೆಲೆ ಅಂಗಡಿಗೆ ಬಂದು ಪಡಿತರ ತೆಗೆದುಕೊಳ್ಳಬೇಕು. ಇದರಿಂದ ಕಾರ್ಡುದಾರರು ಅಲೆದಾಡುವ ಪರಿಸ್ಥಿತಿಯಿತ್ತು, ಈ ಬಗ್ಗೆ ಅನೇಕ ದೂರುಗಳು ಕೇಳಿ ಬಂದಿದ್ದೇವೆ. ಆದ್ದರಿಂದ ಕೂಪನ್ ವ್ಯವಸ್ಥೆಯ ಜೊತೆಗೆ ಬಯೋಮೆಟ್ರಿಕ್ ಧೃಢೀಕರಣ ಪದ್ಧತಿಯ ಮೂಲಕ ಪಡಿತರ ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


