ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಜಿಲ್ಲೆಗಳ ಖಜಾನೆ ಮೇಲೆ ಹದ್ದಿನ ಕಣ್ಣಿಟ್ಟಿರುವ ಪಿಯುಸಿ ಇಲಾಖೆ
ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ...

Published On :
ಬೆಂಗಳೂರು: ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲಾ ಅಗತ್ಯ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಕಳೆದ ವರ್ಷದಂತೆ ಈ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ನೋಡಿಕೊಳ್ಳಲು ಕೇಂದ್ರ ಕಚೇರಿಯಲ್ಲಿ ನಿಗಾ ಕೊಠಡಿಯನ್ನು ಸ್ಥಾಪಿಸಿ ರಾಜ್ಯಾದ್ಯಂತ ಪ್ರಶ್ನೆ ಪತ್ರಿಕೆ ಸಂಗ್ರಹವಾಗಿರುವಲ್ಲಿ ಖಜಾನೆಯ ಮೇಲ್ವಿಚಾರಣೆ ನಡೆಸಲಿದೆ.
ನಿಯಂತ್ರಣ ಕೊಠಡಿಯನ್ನು ಪರೀಕ್ಷಾ ವಿಭಾಗದ ಸಿಬ್ಬಂದಿ ನೋಡಿಕೊಳ್ಳುತ್ತಾರೆ. ಖಜಾನೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ನಿಯೋಜಿಸಲಾಗಿದೆ. ಪ್ರಶ್ನೆಪತ್ರಿಕೆ ಇಟ್ಟಿರುವ ಕೊಠಡಿಗೆ ಯಾರಾದರೂ ಅನಧಿಕೃತ ವ್ಯಕ್ತಿಗಳು ಪ್ರವೇಶಿಸಿದರೆ ಪದವಿಪೂರ್ವ ವಿಭಾಗದ ನಿರ್ದೇಶಕರ ಮೊಬೈಲ್ ಫೋನ್ ಗೆ ಎಚ್ಚರಿಕೆ ಕರೆ ಹೋಗುತ್ತದೆ. ಅಲ್ಲದೆ ಸ್ಥಳೀಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲು ಖಜಾನೆ ಕೊಠಡಿಯಲ್ಲಿ ಅಲರಾಂ ಶಬ್ದ ಮಾಡುತ್ತದೆ.
ನಿಯಂತ್ರಣ ಕೊಠಡಿ ಎಲ್ಲಾ 30 ಜಿಲ್ಲೆಗಳ ಖಜಾನೆಯನ್ನು ನಿಗಾವಹಿಸುತ್ತದೆ. ಈ ವ್ಯವಸ್ಥೆಯನ್ನು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಪರಿಶೀಲನೆ ನಡೆಸಿದರು.
ಪರೀಕ್ಷೆ ಆರಂಭವಾಗುವುದಕ್ಕೆ ಮೂರು ದಿನಗಳ ಮೊದಲು ಪ್ರಶ್ನೆ ಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಶೇಖರಿಸಲಾಗುತ್ತದೆ. ಅಲ್ಲಿಂದ ಪ್ರಶ್ನೆ ಪತ್ರಿಕೆಗಳು ಪರೀಕ್ಷೆ ದಿನ ಪರೀಕ್ಷಾ ಕೇಂದ್ರಗಳಿಗೆ ವಿತರಿಸಲಾಗುತ್ತದೆ.
ಕಳೆದ ವರ್ಷ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ತನಿಖೆ ನಡೆಸುತ್ತಿರುವ ಸಿಐಡಿ, ಪಿಯು ಮಂಡಳಿ ಖಜಾನೆಯಲ್ಲಿ ಹಲವು ನ್ಯೂನತೆಗಳಿದ್ದು ಕೆಲವು ಖಜಾನೆ ಅಧಿಕಾರಿಗಳೇ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣ ಎಂದು ಹೇಳಿದೆ. ಕೆಲವು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


