ಪರಿಸರ ಸ್ನೇಹಿ ಪ್ರಯಾಣ: ಬೆಂಗಳೂರಿನ ರಸ್ತೆಗಿಳಿಯಲಿವೆ 150 ಎಲೆಕ್ಟ್ರಿಕ್ ಬಸ್ ಗಳು!
ಬೆಂಗಳೂರಿನ ರಸ್ತೆ ಪ್ರಯಾಣವನ್ನು ಪರಿಸರ ಸ್ನೇಹಿಯಾಗಿಸಲು ಬಿಎಂಟಿಸಿ ಮುಂದಾಗಿದ್ದು, ವರ್ಷಾಂತ್ಯಕ್ಕೆ 150 ಎಲೆಕ್ಟ್ರಿಕ್ ಬಸ್ ಗಳು ಸಂಚರಿಸಲಿವೆ.

Published On :
ಬೆಂಗಳೂರು: ಬೆಂಗಳೂರಿನ ರಸ್ತೆ ಪ್ರಯಾಣವನ್ನು ಪರಿಸರ ಸ್ನೇಹಿಯಾಗಿಸಲು ಬಿಎಂಟಿಸಿ ಮುಂದಾಗಿದ್ದು, ವರ್ಷಾಂತ್ಯಕ್ಕೆ 150 ಎಲೆಕ್ಟ್ರಿಕ್ ಬಸ್ ಗಳು ಸಂಚರಿಸಲಿವೆ.
ಸೆಪ್ಟೆಂಬರ್ ವೇಳೆಗೆ 150 ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಲಾಗುವುದು ಎಂದು ಯುಐಟಿಪಿ ಇಂಡಿಯಾ ಸೆಮಿನಾರ್ ನಲ್ಲಿ ಭಾಗವಹಿಸಿ ಮಾತನಾಡಿರುವ ಬಿಎಂಟಿಸಿ ಎಂ.ಡಿ (ವ್ಯವಸ್ಥಾಪಕ ನಿರ್ದೇಶಕಿ) ಏಕ್ ರೂಪ್ ಕೌರ್ ಮಾಹಿತಿ ನೀಡಿದ್ದಾರೆ. ರಾಜ್ಯ ಸಾರಿಗೆ ಉದ್ಯಮಕ್ಕೆ ಎಲೆಕ್ಟ್ರಾನಿಕ್ ಬಸ್ ಗಳು ಸೂಕ್ತವಾಗಿದ್ದು, ಪರಿಸರ ಸ್ನೇಹಿ, ಕಡಿಮೆ ನಿರ್ವಹಣೆ ಹಾಗೂ ಪ್ರಯಾಣಿಕರಿಗೂ ಆರಾಮದಾಯಕವಾಗಿರಲಿದೆ. ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ಬಸ್ ಗಳ ಕಾರ್ಯನಿರ್ವಹಣೆ ವೆಚ್ಚವೂ ಕಡಿಮೆ ಇರಲಿದೆ ಎಂದು ಕೌರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನ್ಯಾಷನಲ್ ಎಲೆಕ್ಟ್ರಿಕ್ ಮೊಬಿಲಿಟಿ ಸಮಿತಿಯ ಯೋಜನೆ-2020 ಅಡಿಯಲ್ಲಿ ವಿದ್ಯುತ್ ಚಾಲಿತ ವಾಹನಗಳ ಅಳವಡಿಕೆಗೆ ಬಿಎಂಟಿಸಿ ಈಗಾಗಲೇ ತಾತ್ವಿಕ ಅನುಮೋದನೆ ನೀದಿದೆ. ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ಸಂಸ್ಥೆಯೊಂದು ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಿ ಕಾರ್ಯಾರಂಭ ಮಾಡುತ್ತಿದೆ ಎಂದಿದ್ದಾರೆ ಏಕ್ ರೂಪ್ ಕೌರ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


