ಗೌರವ ಸಲ್ಲಿಸಲು ಯಡ್ಯೂರಪ್ಪ ಕಾಲಿಗೆ ಬೀಳುತ್ತಿರುವ ಕಾರ್ಯಕರ್ತರು: ವಿಡಿಯೋ ವೈರಲ್
ಸಂಸ್ಕೃತಿ, ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಬಿಜೆಪಿಯಲ್ಲಿ ತಮಿಳುನಾಡು ರಾಜಕಾರಣದ ಮಾದರಿಯ ಶಿಸ್ತು ಬೆಳೆಯುತ್ತಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ರಾಜ್ಯ ಬಿಜೆಪಿಯ ಅಧ್ಯಕ್ಷ, ಮಾಜಿ ಸಿಎಂ ಯಡಿಯೂರಪ್ಪ ಅವರ

Published On :
ಬೆಂಗಳೂರು: ಸಂಸ್ಕೃತಿ, ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಬಿಜೆಪಿಯಲ್ಲಿ ತಮಿಳುನಾಡು ರಾಜಕಾರಣದ ಮಾದರಿಯ ಶಿಸ್ತು ಬೆಳೆಯುತ್ತಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ರಾಜ್ಯ ಬಿಜೆಪಿಯ ಅಧ್ಯಕ್ಷ, ಪ್ರಭಾವಿ ನಾಯಕ, ಮಾಜಿ ಸಿಎಂ ಯಡಿಯೂರಪ್ಪ ಅವರ ನಡೆ ಇಂತಹ ಪ್ರಶ್ನೆ ಎದುರಾಗಲು ಕಾರಣವಾಗಿದೆ.
ರಾಜಕಾರಣಿಗಳು, ಪ್ರಮುಖವಾಗಿ ಅಧಿಕಾರದಲ್ಲಿರುವ ರಾಜಕಾರಣಿಗಳ ಸೋಮಾರಿತನ, ದುರಹಂಕಾರ, ದರ್ಪ ಅಂಗರಕ್ಷಕರಿಂದ, ಪೊಲೀಸ್ ಪೇದೆಗಳಿಂದ ಶೂ ಲೇಸ್ ಕಟ್ಟಿಸಿಕೊಳ್ಳುವ ರೀತಿಯ ಪ್ರಕರಣಗಳಿಗೆ ಸೀಮಿತವಾಗಿತ್ತು ಎಂದುಕೊಂಡಿದ್ದೆವು ಆದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಇದನ್ನೂ ಮೀರಿಸುವಂತಹ ಪ್ರಕರಣವನ್ನು ಬಯಲು ಮಾಡಿದ್ದು, ಬಿಜೆಪಿಯ ಕಾರ್ಯಕರ್ತರು ಗೌರವ ಸಲ್ಲಿಸಲು ಯಡಿಯೂರಪ್ಪನವರ ಕಾಲಿಗೆ ಎರಗುತ್ತಿರುವುದು ದೃಶ್ಯಾವಳಿಯಲ್ಲಿ ಸೆರೆಯಾಗಿದೆ.
ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಒಂದಷ್ಟು ಜನ ಕಾರ್ಯಕರ್ತರು ಯಡಿಯೂರಪ್ಪನವರ ಕಾಲು ಮುಟ್ಟಿ ನಮಸ್ಕರಿಸುತ್ತಿರುವುದು ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಪಕ್ಷದ ಶಾಸಕರು, ಕಾರ್ಯಕರ್ತರು ನಮಸ್ಕರಿಸುತ್ತಿದ್ದ ರೀತಿ ಹಾಗೂ ಎಐಎಡಿಎಂಕೆ ಪಕ್ಷದಲ್ಲಿದ್ದ ಸಂಸ್ಕೃತಿಯನ್ನೇ ನೆನಪಿಸುತ್ತಿದೆ. ಸಂಸ್ಕೃತಿ, ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಬಿಜೆಪಿಯಲ್ಲಿ ಇಂತಹ ಬೆಳವಣಿಗೆ ನಡೆದಿರುವುದು ಅಚ್ಚರಿ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


