ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!
ರೈಲ್ವೇ ಹಳಿಯಲ್ಲಿ ಬಿರುಕು ಕಂಡ ಬಂದ ಹಿನ್ನಲೆಯಲ್ಲಿ ರೈಲು ಚಾಲಕ ರೈಲನ್ನು ನಿಲ್ಲಿಸಿ ಆಗಬಹುದಾಗಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿರುವ ಘಟನೆ ಕರ್ನಾಟಕದ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ: ರೈಲ್ವೇ ಹಳಿಯಲ್ಲಿ ಬಿರುಕು ಕಂಡ ಬಂದ ಹಿನ್ನಲೆಯಲ್ಲಿ ರೈಲು ಚಾಲಕ ರೈಲನ್ನು ನಿಲ್ಲಿಸಿ ಆಗಬಹುದಾಗಿದ್ದ ದೊಡ್ಡ ದುರಂತವೊಂದನ್ನು ತಪ್ಪಿಸಿರುವ ಘಟನೆ ಕರ್ನಾಟಕದ ವಿಜಯಪುರದಲ್ಲಿ ನಡೆದಿದೆ.
ಸೊಲ್ಲಾಪುರದರಿಂದ ಹುಬ್ಬಳ್ಳಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ರೈಲು ದುರಂತವೊಂದು ತಪ್ಪಿದ್ದು, ರೈಲು ಹಳಿ ಬಿರುಕು ಸರಿಪಡಿಸಿದ ಬಳಿಕ ರೈಲು ಪ್ರಯಾಣ ಮುಂದುವರೆಸಿದೆ. ವಿಜಯಪುರದ ಅಲಿಯಾಬಾದ್ ಬಳಿ ಹಳಿಯಲ್ಲಿ ಬಿರುಕು ಬಿಟ್ಟಿರುವುದನ್ನು ಗಮನಿಸಿದ ಚಾಲಕ ತಕ್ಷಣ ರೈಲನ್ನು ನಿಲ್ಲಿಸಿ, ಆಗಬಹುದಾಗಿದ್ದ ದೊಡ್ಡ ದುರಂತವನ್ನು ತಪ್ಪಿಸಿದ್ದಾನೆ. ಅಲ್ಲದೆ ಕೂಡಲೇ ರೈಲ್ವೇ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿ ರೈಲು ಹಳಿ ಸರಿಪಡಿಸುವಂತೆ ಮಾಹಿತಿ ನೀಡಿದ್ದಾನೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ರೈಲ್ವೆ ಇಲಾಖೆ ಸಿಬ್ಬಂದಿ ಹಳಿಯನ್ನು ದುರಸ್ಥಿಗೊಳಿಸಿ ರೈಲು ಚಲಿಸಲು ಅನುವು ಮಾಡಿಕೊಟ್ಟರು. ಈ ಘಟನೆಯಿಂದಾ ಈ ಮಾರ್ಗದಲ್ಲಿ 45 ನಿಮಿಷ ತಡವಾಗಿ ರೈಲು ಪ್ರಯಾಣ ಮುಂದುವರೆಯಿತು. ಹಳಿ ದುರಸ್ಥಿ ಕಾರ್ಯ ಪೂರ್ಣ ಗೊಂಡಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರ ಸುಗಮವಾಗಿ ನಡೆಯುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ರೈಲ್ವೆ ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಶ್ಲಾಘನೆ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


