ಕರ್ನಾಟಕದ 1500ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಪೂರ್ಣಾವಧಿ ಇಂಗ್ಲೀಷ್ ಶಿಕ್ಷಕರಿಲ್ಲ!
ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ಸರ್ಕಾರಿ ಶಾಲೆಗಳ 1500ಕ್ಕೂ ಹೆಚ್ಚು ಶಾಲೆಗಳಲ್ಲಿ...

Published On :
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ಸರ್ಕಾರಿ ಶಾಲೆಗಳ 1500ಕ್ಕೂ ಹೆಚ್ಚು ಶಾಲೆಗಳಲ್ಲಿ ಪೂರ್ಣಾವಧಿ ಶಿಕ್ಷಕರೇ ಇಲ್ಲದಂತಾಗಿದೆ.
ರಾಜ್ಯದಲ್ಲಿ 4,669 ಸರ್ಕಾರಿ ಶಾಲೆಗಳಲ್ಲಿದ್ದು ಅದರಲ್ಲಿ 1544ಕ್ಕೂ ಹೆಚ್ಚು ಶಾಲೆಗಳಲ್ಲಿ ಇಂಗ್ಲೀಷ್ ಶಿಕ್ಷಕರಿಲ್ಲ. 2009ರಲ್ಲಿ ಹಲವು ಇಂಗ್ಲೀಷ್ ಶಿಕ್ಷಕರು ನಿವೃತ್ತಿ ಹೊಂದಿದ್ದ ನಂತರ ಇಂಗ್ಲೀಷ್ ಶಿಕ್ಷಕರ ಕೊರತೆ ಎದುರಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಶಿಕ್ಷಣ ಇಲಾಖೆಯ ಪ್ರಕಾರ, 751 ಇಂಗ್ಲೀಷ್ ಶಿಕ್ಷಕರು ನಿವೃತ್ತಿ ಹೊಂದಿದ್ದು ಸದ್ಯ 793 ಹುದ್ದೆಗಳು ಖಾಲಿ ಇವೆ ಎಂದು ತಿಳಿದುಬಂದಿದೆ. 2014-15ರ ಶೈಕ್ಷಣಿಕ ಅವಧಿಯಲ್ಲಿ 293 ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಸೂಚನೆ ನೀಡಿದರು. ಇಲ್ಲಿಯವರೆಗೂ ಹುದ್ದೆಗಳು ಭರ್ತಿಯಾಗಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


