ಕಾರಿಗೆ ಬಸ್ ಡಿಕ್ಕಿ: ನಗರದ ಇಬ್ಬರು ಸಾವು
ಕಾರಿಗೆ ಬಸ್ ಡಿಕ್ಕಿ ಹೊಡೆ ಪರಿಣಾಮ ಬಾಲಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಚೆಕ್ ಪೋಸ್ಟ್ ಬಳಿ ನಡೆದಿದೆ...

Published On :
ಶ್ರೀರಂಗಪಟ್ಟಣ: ಕಾರಿಗೆ ಬಸ್ ಡಿಕ್ಕಿ ಹೊಡೆ ಪರಿಣಾಮ ಬಾಲಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಚೆಕ್ ಪೋಸ್ಟ್ ಬಳಿ ನಡೆದಿದೆ.
ಬೆಂಗಳೂರು ಆರ್.ಟಿ. ನಗರದ ನಿವಾಸಿ ಲಿಂಗೇಶ್ (37) ಸ್ಥಳದಲ್ಲೇ ಮೃತಪಟ್ಟರೆ, ಈತನ ದೊಡ್ಡಮ್ಮನ ಮಗ ಕಿರಣ್ (11) ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ಮಧ್ಯೆ ಸಾವನ್ನಪ್ಪಿದ್ದಾನೆ.
ಕಾರಿನಲ್ಲಿದ್ದ ಅರುಣ್ (23), ರಾಹುಲ್ (34) ಹಾಗೂ ಕಾರ್ತಿಕೇಯನ್ (36) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಗಾಯಾಳುಗಳು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ತಮ್ಮ ತಾಯಿ ಕಮಲಮ್ಮರ 11ನೇ ದಿನದ ಶ್ರದ್ಧಾಕಾರ್ಯ ಮುಗಿಸಿ ಬೆಂಗಳೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ ಬಿಇಎಂಎಲ್ ನೌಕರರನ್ನು ಕೊಂಡೊಯ್ಯುತ್ತಿದ್ದ ಸಾರಿಗೆ ವಾಹನದ ಕಾರಿನ ಮುಂಭಾಗಕ್ಕೆ ಏಕಾಏಕಿ ಡಿಕ್ಕಿ ಹೊಡೆದಿದೆ. ಶ್ರೀರಂಗಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


