ಬರಹಗಾರ ಯೋಗೇಶ್ ಮಾಸ್ಟರ್ ಮುಖಕ್ಕೆ ಮಸಿ ಬಳಿದ ಪ್ರಕರಣ; ಕೇಸು ದಾಖಲು
ಕನ್ನಡ ಸಾಹಿತ್ಯ ಬರಹಗಾರ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಗಳು ಕಪ್ಪು ಶಾಯಿ...

Published On :
ದಾವಣಗೆರೆ: ಕನ್ನಡ ಸಾಹಿತ್ಯ ಬರಹಗಾರ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಅಪರಿಚಿತ ವ್ಯಕ್ತಿಗಳು ಕಪ್ಪು ಶಾಯಿ ಬಳಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸು ದಾಖಲಿಸಲಾಗಿದೆ.
ಕನ್ನಡದ ವಿವಾದಾತ್ಮಕ ಕಾದಂಬರಿ 'ದುಂಡಿ'ಯ ಲೇಖಕರಾಗಿರುವ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ನಿನ್ನೆ ದಾವಣಗೆರೆಯಲ್ಲಿ ಅಪರಿಚಿತ ವ್ಯಕ್ತಿಗಳು ಕಪ್ಪು ಬಣ್ಣದ ಶಾಯಿಯನ್ನು ಬಳಿದಿದ್ದರು. ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹೊರಗೆ ಚಹಾ ಸೇವಿಸಲು ಬಂದಿದ್ದ ವೇಳೆ ಯೋಗೇಶ್ ಅವರ ಮುಖಕ್ಕೆ ಶಾಯಿ ಬಳಿಯಲಾಗಿತ್ತು.
ಕೆಲ ಬಲ ಪಂಥೀಯ ಸಂಘಟನೆಗಳು ಈ ಕೃತ್ಯದ ಹಿಂದೆ ಇರಬಹುದು ಎಂದು ಹೇಳಲಾಗುತ್ತಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


