ರಾಜ್ಯ

ಡ್ರಗ್ ಡೀಲಿಂಗ್ ವಿದೇಶಿ ವಿದ್ಯಾರ್ಥಿಗಳನ್ನು ವಾಪಸ್ ಕಳಿಸುವುದು ಹೇಗೆ?: ಮೊದಲು ಕೇಸ್ ರದ್ದುಗೊಳಿಸಿ: ಪರಂ

ಡ್ರಗ್ ಡೀಲಿಂಗ್ ನಲ್ಲಿ ತೊಡಗಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಸರ್ಕಾರವೂ ಗೋವಾ ಮಾದರಿಯನ್ನು ಅನುಸರಿಸಲು ಮುಂದಾಗಿದೆ.

ಡ್ರಗ್ ಡೀಲಿಂಗ್ ವಿದೇಶಿ ವಿದ್ಯಾರ್ಥಿಗಳನ್ನು ವಾಪಸ್ ಕಳಿಸುವುದು ಹೇಗೆ?: ಮೊದಲು ಕೇಸ್ ರದ್ದುಗೊಳಿಸಿ: ಪರಂ
ಗೃಹ ಸಚಿವ ಪರಮೇಶ್ವರ್
Published On :
ಬೆಂಗಳೂರು: ಡ್ರಗ್ ಡೀಲಿಂಗ್ ನಲ್ಲಿ ತೊಡಗಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಸರ್ಕಾರವೂ ಗೋವಾ ಮಾದರಿಯನ್ನು ಅನುಸರಿಸಲು ಮುಂದಾಗಿದೆ. ರಾಜ್ಯದಲ್ಲಿ ಡ್ರಗ್ ಡೀಲಿಂಗ್ ನಲ್ಲಿ ತೊಡಗಿರುವ ನೈಜೀರಿಯಾ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲು ಚಿಂತನೆ ನಡೆಸಿದೆ. 
ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದು, ಡ್ರಗ್ ಡೀಲಿಂಗ್ ನಲ್ಲಿ ತೊಡಗಿರುವ ವಿದೇಶಿ ವಿದ್ಯಾರ್ಥಿಗಳು ವೀಸಾ ಮುಕ್ತಾಯಗೊಂಡ ನಂತರವೂ ಇಲ್ಲೇ ಇರುವ ಪ್ರವೃತ್ತಿ ಹೊಂದಿರುತ್ತಾರೆ, ಅಂತಹವರನ್ನು ಗಡಿಪಾರು ಮಾಡಬೇಕು, ಗಡಿಪಾರು ಮಾಡಲು ಪೂರಕವಾಗಿ ಗೋವಾದಲ್ಲಿ ಮಾಡಿದಂತೆ ಡ್ರಗ್ ಡೀಲಿಂಗ್ ನಲ್ಲಿ ತೊಡಗಿರುವ ವಿದ್ಯಾರ್ಥಿಗಳ ವಿರುದ್ಧ ಇರುವ ಪ್ರಕರಣಗಳನ್ನು ರದ್ದುಗೊಳಿಸಬೇಕು ಎಂದಿರುವ ಅವರು, ಈ ಬಗ್ಗೆ ಗೋವಾದಿಂದ ಮಾಹಿತಿ ತರಿಸಿಕೊಳ್ಳುತ್ತೇನೆ, ಸಾಧ್ಯವಾದರೆ ಅಲ್ಲಿನ ಮಾದರಿಯನ್ನೇ ಇಲ್ಲಿಯೂ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 
ತಮ್ಮ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದೇಶಿ ವಿದ್ಯಾರ್ಥಿಗಳ ಬಗ್ಗೆ ಪೊಲೀಸ್ ಠಾಣೆಗೆ ಮಾಹಿತಿ ಸಲ್ಲಿಸಲು ಕಾಲೇಜುಗಳಿಗೆ ಸೂಚಿಸಲಾಗಿದೆ. 2015 ರಿಂದ ನೈಜೀರಿಯಾ ವಿದ್ಯಾರ್ಥಿಗಳ ವಿರುದ್ಧ 23 ಪ್ರಕರಣಗಳು ದಾಖಲಾಗಿವೆ. 31 ಜನರನ್ನು ಬಂಧಿಸಲಾಗಿದ್ದು, ಅಂತಾರಾಷ್ಟ್ರೀಯ ಡ್ರಗ್ ಜಾಲದೊಂದಿಗೆ ನೈಜೀರಿಯಾ ವಿದ್ಯಾರ್ಥಿಗಳು ಸಂಪರ್ಕ ಹೊಂದಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.