ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತ ಪೋಸ್ಟ್ ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ
ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಪ್ರತಿಕ್ರಿಯೆಯಿಂದ ಸುದ್ದಿಯಾಗಿದ್ದ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತ ಫೇಸ್ ಬುಕ್ ಪೋಸ್ಟ್ ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

Published On :
ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಪ್ರತಿಕ್ರಿಯೆಯಿಂದ ಸುದ್ದಿಯಾಗಿದ್ದ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತ ಫೇಸ್ ಬುಕ್ ಪೋಸ್ಟ್ ಗೆ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.
ಖಾಸಗಿ ಮಾಧ್ಯಮವೊಂದರ ವರದಿಯನ್ನಷ್ಟೇ ತಮ್ಮ ಫೇಸ್ ಬುಕ್ ನ ಪೋಸ್ಟ್ ನಲ್ಲಿ ಅಪ್ ಡೇಟ್ ಮಾಡಿದ್ದಾಗಿ ಸಂಸದರು ಸ್ಪಷ್ಟನೆ ನೀಡಿದ್ದು, ರೂಪಾ ಮೌದ್ಗೀಲ್ ಅವರು ಅದನ್ನು ಓದಲು ಸ್ವಲ್ಪ ಸಮಯ ವ್ಯಯಿಸಲಿ ಎಂದು ಹೇಳಿದ್ದಾರೆ. ಕರ್ನಾಟಕದಿಂದ ಕೇಂದ್ರ ಸೇವೆಗೆ ನಿಯೋಜನೆಗೊಂಡಿರುವ ಐಪಿಎಸ್ ಅಧಿಕಾರಿಗಳ ಬಗ್ಗೆ ಪಬ್ಲಿಕ್ ಟಿವಿ ಸುದ್ದಿ ವಾಹಿನಿಯ ವೆಬ್ ಸೈಟ್ ನಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಯನ್ನು ಸಂಸದ ಪ್ರತಾಪ್ ಸಿಂಹ ಅವರು ಫೇಸ್ ಬುಕ್ ನಲ್ಲಿ ರಿಪೋಸ್ಟ್ ಮಾಡಿದ್ದರು.
ರಿಪೋಸ್ಟ್ ಗೆ ಪ್ರತಿಕ್ರಿಯೆ ನೀಡಿದ್ದ ಐಪಿಎಸ್ ಅಧಿಕಾರಿ ರೂಪಾ ಮೌದ್ಗೀಲ್ ಅಧಿಕಾರಿಗಳು ಅವರ ಕೆಲಸ ಮಾಡಲು ಬಿಡಿ, ರಾಜಕೀಯದಿಂದ ಅಧಿಕಾರಿಗಳನ್ನು ದೂರವಿರಿಸಿ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಂಸದ ಪ್ರತಾಪ್ ಸಿಂಹ, "ವರದಿಯನ್ನಷ್ಟೇ ನನ್ನ ಫೇಸ್ ಬುಕ್ ನ ಪೋಸ್ಟ್ ನಲ್ಲಿ ರೀಪೊಸ್ಟ್ ಮಾಡಿದ್ದೇನೆ ನಿಮಗೆ ಬಿಡುವಿದ್ದರೆ ಅದನ್ನು ಓದಿ" ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Facebook postಫೇಸ್ ಬುಕ್ ಪೋಸ್ಟ್Pratap Simhaಪ್ರತಾಪ್ ಸಿಂಹMysuru MPIPS officers transferಮೈಸೂರು ಸಂಸದಐಪಿಎಸ್ ಅಧಿಕಾರಿಗಳ ವರ್ಗಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


