ಕೋಲಾರ: ಟೆಂಪೋ ಟ್ರಾವೆಲ್ಲರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿ: ಮೂವರ ದಾರುಣ ಸಾವು
ಟೆಂಪೋ ಟ್ರಾವೆಲರ್ ಹಾಗೂ ಆಯಿಲ್ ಟ್ಯಾಂಕರ್ ನಡುವೆ ಡಿಕ್ಕಿ ಆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ದಾರುಣ ಘಟನೆ ಆಂಧ್ರದ ಚಿತ್ತೂರು ...

ಕೋಲಾರ: ಟೆಂಪೋ ಟ್ರಾವೆಲರ್ ಹಾಗೂ ಆಯಿಲ್ ಟ್ಯಾಂಕರ್ ನಡುವೆ ಡಿಕ್ಕಿ ಆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ದಾರುಣ ಘಟನೆ ಆಂಧ್ರದ ಚಿತ್ತೂರು ಜಿಲ್ಲೆಯ ಲಕ್ಷ್ಮಯ್ಯ ಕಂಡ್ರಿಗ ಬಳಿ ನಡೆದಿದೆ.
ಅಪಘಾತದಲ್ಲಿ ಕರ್ನಾಟಕದ ತುಮಕೂರಿನ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಟೆಂಪೋ ಟ್ರಾವಲರ್ ಚಾಲಕ ವಿಶಾಲ್ ಬಾಬು (35), ಕಾಮಾಕ್ಷಿ (27), ಪುಟ್ಟಬಾಲಕ ರಿದಯ್ (2) ಸ್ಥಳದಲ್ಲಿಯೇ ಸಾವಿಗೀಡಾದವರು. ಅಂತೆಯೇ ಉಳಿದ ಮೂವರ ಸ್ಥಿತಿ ಗಂಭೀರವಾಗಿದ್ದು, ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರಿನಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 12 ಮಂದಿ ಟೆಂಪೋ ಟ್ರಾವಲರ್‌ನಲ್ಲಿ ಹೊರಟಿದ್ದರು ಎನ್ನಲಾಗಿದೆ. ಈ ಸಂಬಂಧ ಬಂಗಾರಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


