ರಾಜ್ಯ

ಉತ್ತರಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ ಆಯ್ಕೆ ತಪ್ಪು ನಿರ್ಧಾರ: ಖರ್ಗೆ

ಸಂಸದ ಯೋಗಿ ಆದಿತ್ಯನಾಥ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದು ಸರಿಯಲ್ಲ. ಇದು ಬಿಜೆಪಿಯ ತಪ್ಪು ನಿರ್ಧಾರ...

ಉತ್ತರಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ ಆಯ್ಕೆ ತಪ್ಪು ನಿರ್ಧಾರ: ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Published On :
ಯಾದಗಿರಿ: ಸಂಸದ ಯೋಗಿ ಆದಿತ್ಯನಾಥ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದು ಸರಿಯಲ್ಲ. ಇದು ಬಿಜೆಪಿಯ ತಪ್ಪು ನಿರ್ಧಾರ ಎಂದು ಕೇಂದ್ರ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. 
ಯಾದಗಿರಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಉತ್ತರ ಪ್ರದೇಶದಲ್ಲಿ ಬಹುಮತ ಪಡೆದಿರುವುದರಿಂದ ಸಿಎಂ ಆಯ್ಕೆ ಆ ಪಕ್ಷದ ಆಂತರಿಕ ವಿಚಾರವಾಗಿದೆ. ಆದರೆ ಆದಿತ್ಯನಾಥ ಅನೇಕ ಬಾರಿ ಸಂವಿಧಾನ ವಿರೋಧಿ ಹೇಳಿಕೆ ನೀಡುವ ಮೂಲಕ ಹಿಂಸೆಗಳಿಗೆ ಪ್ರಚೋದನೆ ನೀಡಿದ್ದಾರೆ. ಇಂತವರು ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ. 
ವಿವಾದಿತ ಯೋಗಿ ಆದಿತ್ಯನಾಥ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಮೂಲಕ ಬಿಜೆಪಿ ದೇಶಕ್ಕೆ ಕೆಟ್ಟ ಸಂದೇಶವನ್ನು ನೀಡಿದಂತಾಗಿದೆ. ಪ್ರಜಾಪ್ರಭುತ್ವದಲ್ಲಿ ಸಂವಿಧಾನಬದ್ಧ ಮಾತನಾಡುವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬೇಕಿತ್ತು. ಆದರೆ ಸಮಾಜದಲ್ಲಿ ಶಾಂತಿ ಭಂಗ, ಜಗಳಗಂಟ ನಾಯಕನನ್ನು ಪಕ್ಷವು ಆಯ್ಕೆ ಮಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.