ರಾಜ್ಯ

ದಾಳಿ ಸಂದರ್ಭದಲ್ಲಿ ಸಂಗ್ರಹಿಸಿದ್ದ ಪುರಾವೆಗಳು ಸೋರಿಕೆಯಾಗಿಲ್ಲ: ಐಟಿ ಇಲಾಖೆ

ಡೈರಿಗೇಟ್ ವಿವಾದಕ್ಕೆ ಸಂಬಂಧಪಟ್ಟಂತೆಎದ್ದಿರುವ ವಿವಾದದ ಹಿನ್ನೆಲೆಯಲ್ಲಿ, ಆದಾಯ ತೆರಿಗೆ ಇಲಾಖೆ...

ದಾಳಿ ಸಂದರ್ಭದಲ್ಲಿ ಸಂಗ್ರಹಿಸಿದ್ದ ಪುರಾವೆಗಳು ಸೋರಿಕೆಯಾಗಿಲ್ಲ: ಐಟಿ ಇಲಾಖೆ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಬೆಂಗಳೂರು: ಡೈರಿಗೇಟ್ ವಿವಾದಕ್ಕೆ ಸಂಬಂಧಪಟ್ಟಂತೆ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ, ಆದಾಯ ತೆರಿಗೆ ಇಲಾಖೆ ದಾಳಿ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾದ ವಸ್ತುಗಳ ಪುರಾವೆಗಳು ಸೋರಿಕೆಯಾಗಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.
ಕಾಂಗ್ರೆಸ್ ನ ವಿಧಾನಪರಿಷತ್ ಸದಸ್ಯ ಕೆ.ಗೋವಿಂದ ರಾಜ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಪಕ್ಷದ ನಾಯಕರು ಹೈಕಮಾಂಡ್ ಗೆ ಅಕ್ರಮವಾಗಿ ಹಣ ನೀಡಿದ ವಿವರಗಳು ಇರುವ ಡೈರಿ ಸಿಕ್ಕಿತ್ತು ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.
ಈ ವಿಷಯ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಸದನ ಕಲಾಪವನ್ನು ಕೂಡ ಮುಂದೂಡಬೇಕಾಗಿ ಬಂತು.
ಕರ್ನಾಟಕ ಮತ್ತು ಗೋವಾದ ಐಟಿ ಇಲಾಖೆ ಮಹಾ ನಿರ್ದೇಶಕ(ತನಿಖೆ) ಬಿ.ಕೆ.ಬಾಲಕೃಷ್ಣ, ನಮ್ಮ ದಾಳಿ ಸಮಯದಲ್ಲಿ ಸಂಗ್ರಹಿಸಲಾದ ಯಾವುದೇ ಪುರಾವೆಗಳು ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಗೋವಿಂದ ರಾಜ್ ಅವರ ಮನೆ ಮೇಲೆ ದಾಳಿ ನಡೆಸಿದ್ದು ನಿಜ, ಆದರೆ ವಶಪಡಿಸಿಕೊಳ್ಳಲಾದ ವಸ್ತುಗಳ ವಿವರ ಬಹಿರಂಗಪಡಿಸಿಲ್ಲ ಎಂದರು.
ಐಟಿ ಇಲಾಖೆಯ ಮುಖ್ಯ ಆಯುಕ್ತ ಬಿಸ್ವರೂಪ್ ಜ್ಹಾ, ಐಟಿ ಕಾಯ್ದೆ ಸೆಕ್ಷನ್ 138ರ ಪ್ರಕಾರ, ದಾಳಿಯ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾದ ವಸ್ತುಗಳ ವಿವರಗಳನ್ನು ಬಹಿರಂಗಪಡಿಸುವಂತಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.