ರಾಜ್ಯ

ಶೀಘ್ರದಲ್ಲೇ 1,300 ಸಂಚಾರಿ ಪೊಲೀಸರ ನೇಮಕ: ಗೃಹ ಸಚಿವ ಪರಮೇಶ್ವರ್

ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಸಂಚಾರ ವ್ಯವಸ್ಥೆಯ ಸುಗಮ ನಿರ್ವಹಣೆಗಾಗಿ 1,300 ಸಂಚಾರಿ ಪೊಲೀಸರನ್ನು ಶೀಘ್ರದಲ್ಲಿಯೇ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು...

ಶೀಘ್ರದಲ್ಲೇ 1,300 ಸಂಚಾರಿ ಪೊಲೀಸರ ನೇಮಕ: ಗೃಹ ಸಚಿವ ಪರಮೇಶ್ವರ್
ಗೃಹ ಸಚಿವ ಡಾ.ಜಿ. ಪರಮೇಶ್ವರ್
Published On :
ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಸಂಚಾರ ವ್ಯವಸ್ಥೆಯ ಸುಗಮ ನಿರ್ವಹಣೆಗಾಗಿ 1,300 ಸಂಚಾರಿ ಪೊಲೀಸರನ್ನು ಶೀಘ್ರದಲ್ಲಿಯೇ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಗುರುವಾರ ಹೇಳಿದ್ದಾರೆ. 
ವಿಧಾನ ಪರಿಷತ್ ನಲ್ಲಿ ಆಡಳಿತ ಪಕ್ಷದ ಸದಸ್ಯೆ ನಟಿ ಡಾ.ಜಯಮಾಲಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಂಚಾರ ದಟ್ಟಣೆ ಕುರಿತಂತೆ ಈಗಾಗಲೇ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರು ನಗರ ಅತಿ ವೇಗವಾಗಿ ಬೆಳೆಯುತ್ತಿದೆ. ದೆಹಲಿಯಲ್ಲಿ 85 ಲಕ್ಷ ಚೆನ್ನೈ 44 ಲಕ್ಷ, ಕೋಲ್ಕತಾದಲ್ಲಿ 28 ಲಕ್ಷ ವಾಹನಗಳು ನೋಂದಣಿಯಾಗುತ್ತಿವೆ. ನಗದಲ್ಲೂ ಸುಮಾರು 65 ಲಕ್ಷ ವಾಹನಗಳು ನೋಂದಣಿಯಾಗುತ್ತಿದ್ದು, ಸಂಚಾರಿ ಪೊಲೀಸರಿಗೆ ಸಂಚಾರ ದಟ್ಟಣೆ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ ಎಂದು ಹೇಳಿದರು. 
2003ರಲ್ಲಿ ನಗರದಲ್ಲಿ 19 ಲಕ್ಷ ವಾಹನಗಳಿದ್ದವು. ಇದೀಗ 66 ಲಕ್ಷ ವಾಹನಗಳು ರಸ್ತೆಯಲ್ಲಿ ಸಂಚಾರ ಮಾಡುತ್ತವೆ. ಮೇಲ್ಸೇತುವೆ, ರಸ್ತೆ ಅಗಲೀಕರಣದಂತಹ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಮಿತಿ ಮೀರಿದ ವಾಹನಗಳಿಂದ ಪ್ರತಿ ದಿನದಟ್ಟಣೆ ಎದುರಿಸುವಂತಾಗಿದೆ. ಸಂಚಾರ ನಿಯಮ ಉಲ್ಲಂಘಿಸುವವರನ್ನು ಹಿಡಿಯುವ ಕೆಲಸ ಟ್ರಾಫಿಕ್ ಪೊಲೀಸರ ಕೆಲಸವಲ್ಲ. ನಗರದ 162 ಜಂಕ್ಷನ್ ಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಹಾಗಾಗಿ ರಸ್ತೆ ನಿಯಮಗಳನ್ನು ಉಲ್ಲಂಘಿಸವವರಿದೆ ದಂಡ ವಿಧಿಸಲಾಗುತ್ತದೆ. 
2016-17ನೇ ವರ್ಷದಲ್ಲಿ 91 ಲಕ್ಷ ಪ್ರಕರಣಗಳು ದಾಖಲಾಗಿವೆ. ರೂ.61 ಕೋಟಿಯನ್ನು ಸಂಗ್ರಹಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ 3400 ಸಂಚಾರಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದು, 5200 ಜನರು ಮಂಜೂರಾತಿಯ ಪಟ್ಟಿಯಲ್ಲಿದ್ದಾರೆ. ಇದರಲ್ಲಿ 1300 ಮಂದಿಯ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.