ಮಾಧ್ಯಮಗಳನ್ನು ನಿಯಂತ್ರಿಸಲು ಹೊರಟಿರುವುದು ಆರೋಗ್ಯಕರ ಬೆಳವಣಿಗೆಯಲ್ಲ: ಸುರೇಶ್ ಕುಮಾರ್
ಮಾಧ್ಯಮಗಳ ನಿಯಂತ್ರಣಕ್ಕೆ ಜಂಟಿ ಸದನ ಸಮಿತಿ ರಚಿಸಲು ಹೊರಟಿರುವ ರಾಜ್ಯ ಸರ್ಕಾರದ...

Published On :
ಬೆಂಗಳೂರು: ಮಾಧ್ಯಮಗಳ ನಿಯಂತ್ರಣಕ್ಕೆ ಜಂಟಿ ಸದನ ಸಮಿತಿ ರಚಿಸಲು ಹೊರಟಿರುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಎಸ್. ಸುರೇಶ್ ಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳನ್ನು ನಿಯಂತ್ರಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ಈ ತೀರ್ಮಾನದ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ವಿಧಾನಸಭಾಧ್ಯಕ್ಷರನ್ನು ಅವರು ಮನವಿ ಮಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸರಿಯಾದ, ಆರೋಗ್ಯಕರ ನಿರ್ಧಾರ ಎಂದು ಭಾವಿಸಬೇಡಿ. ಈ ವಿಷಯದ ಬಗ್ಗೆ ಮತ್ತೊಮ್ಮೆ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವಂತೆ ನಾನು ವಿಧಾನಸಭಾಧ್ಯಕ್ಷರನ್ನು ಮನವಿ ಮಾಡುತ್ತೇನೆ. ಏನಾಗಿದೆ ಮತ್ತು ಮಾಧ್ಯಮಗಳಿಗೆ ಏನು ಅಗತ್ಯ ಎಂಬುದನ್ನು ಮತ್ತೊಮ್ಮೆ ಮೌಲ್ಯಮಾಪನ ಮಾಡುವಂತೆ ಅವರು ಮನವಿ ಮಾಡಿಕೊಂಡರು.
ಸದನಕ್ಕೆ ತನ್ನದೇ ಆದ ಸಂಪ್ರದಾಯವಿರುವುದರಿಂದ ಸಮಿತಿಯನ್ನು ರಚಿಸಲು ಆಗುವುದಿಲ್ಲ. ಈ ಸಮಿತಿಯ ರಚನೆ ಹಿಂದಿರುವ ತಾರ್ಕಿಕತೆಯನ್ನು ಯಾರೂ ಅರ್ಥ ಮಾಡಿಕೊಳ್ಳುವುದಿಲ್ಲ. ಇಲ್ಲಿ ದೂರು ನೀಡುವವರು ಪ್ರಾಸಿಕ್ಯೂಟರ್ ಆಗುತ್ತಾರೆ. ಶಿಫಾರಸ್ಸಿನ ಆಧಾರದಲ್ಲಿ ಅವರು ತೀರ್ಮಾನವನ್ನುಹೊರಡಿಸುತ್ತಾರೆ ಎಂದು ಹೇಳಿದರು.
ವಿಧಾನಮಂಡಲದ ಉಭಯ ಸದನಗಳ ಸದಸ್ಯರ ಆಗ್ರಹದಂತೆ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಪ್ರಸಾರ ಗುಣಮಟ್ಟದಿಂದ ಸಾರ್ವಜನಿಕರ ಮೇಲೆ ಆಗುತ್ತಿರುವ ಪರಿಣಾಮ ನಿಯಂತ್ರಣ ಅಧ್ಯಯನಕ್ಕಾಗಿ ಸಚಿವ ಕೆ.ಆರ್.ರಮೇಶ್ ಕುಮಾರ್ ನೇತೃತ್ವದಲ್ಲಿ 12 ಮಂದಿ ಸದಸ್ಯರ ಜಂಟಿ ಸದನ ಸಮಿತಿ ರಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


