ಮಂಗಳೂರು: ತಣ್ಣೀರ್ ಬಾವಿ ಟ್ರೀ ಪಾರ್ಕ್, ಲೈಬ್ರರಿಗೆ ದುಷ್ಕರ್ಮಿಗಳಿಂದ ಬೆಂಕಿ
ಮಂಗಳೂರಿನ ಕಡಲ ತೀರದಲ್ಲಿರುವ ತಣ್ಣೀರ್ ಬಾವಿ ಟ್ರೀ ಪಾರ್ಕ್ ಗೆ ಅಪರಿಚಿತ ದುಷ್ಕರ್ಮಿಗಳು ಬುಧವಾರ ಮುಂಜಾನೆ ಬೆಂಕಿ ಹಚ್ಚಿರುವ

ಮಂಗಳೂರು: ಮಂಗಳೂರಿನ ಬೀಚ್ ನಲ್ಲಿರುವ ತಣ್ಣೀರ್ ಬಾವಿ ಟ್ರೀ ಪಾರ್ಕ್ ಗೆ ಅಪರಿಚಿತ ದುಷ್ಕರ್ಮಿಗಳು ಬುಧವಾರ ಮುಂಜಾನೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಗ್ರಂಥಾಲಯದಲ್ಲಿದ್ದ 500 ಪುಸ್ತಕಗಳು, ಮರದ ಕಲಾಕೃತಿಗಳು , ಕಿಯಾಸ್ಕ್ ಮತ್ತು ಅರಣ್ಯ ಇಲಾಖೆಯ ಟಿಕೆಟ್ ಕೌಂಟರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ,
ಕಿಡಿಗೇಡಿಗಳ ಕೃತ್ಯದಿಂದ ಸುಮಾರು 7 ಲಕ್ಷ ರು. ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ದುಷ್ಕರ್ಮಿಗಳು ಬೆಂಕಿ ಹಚ್ಚಲು ಇಂಧನ ಬಳಸಿದ್ದಾರೆ ಎಂದು ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಪಣಂಬೂರು ಠಾಣೆಯಲ್ಲಿ ದೂರು ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


